ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದರೂ ಜನರು ಕೊರೊನಾ ಲಸಿಕೆ ಪಡೆಯಲು ಬಹುತೇಕರು ಹಿಂದೇಟು ಹಾಕುತ್ತಿದ್ದಾರೆ. ಕೊರೊನಾ ಲಸಿಕೆ ವಿಚಾರದಲ್ಲಿ ಅಪಪ್ರಚಾರವೂ ನಡೆಯುತ್ತಿದೆ. ಈ ನಡುವಲ್ಲೇ ಅಧಿಕಾರಿಯೋರ್ವರು ಕೊರೊನಾ ಲಸಿಕೆ ಹಾಕಿಸಿಕೊಂಡ್ರೆ 20 ಕೆ.ಜಿ. ಅಕ್ಕಿ ನೀಡುವ ಆಫರ್ ನೀಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿನ ಗ್ರಾಮೀಣ ಭಾಗದ ಜನರಿಗೆ ಕೊರೊನಾ ಲಸಿಕೆ ನೀಡಲು ಅಧಿಕಾರಿಗಳು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸಿರುವ ಅರುಣಾಚಲದ ಸುಬನ್ಸರಿ ಜಿಲ್ಲೆಯ ಅಧಿಕಾರಿಯಾಗಿರುವ ಕಾಶಿವಾಂಗ್ ಚುಕ್ ಅವರು ಕಾರ್ಯನಿರ್ವಹಿಸುತ್ತಿರುವ ಯಜಾಲಿಯಾ ವೃತ್ತದಲ್ಲಿ ಹೊಸ ಐಡಿಯಾವೊಂದನ್ನು ಮಾಡಿದ್ದಾರೆ.
ಲಸಿಕೆ ಹಾಕಿಸಿಕೊಳ್ಳುವವರಿಗೆ 20 ಕೆ.ಜಿ. ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ 1399 ಮಂದಿಯ ಪೈಕಿ 80ಕ್ಕೂ ಅಧಿಕ ಮಂದಿ ಲಸಿಕಾ ಕೇಂದ್ರದತ್ತ ಓಡೋಡಿ ಬಂದಿದ್ದಾರೆ. ಅಲ್ಲದೇ ಇತರರು ಕೂಡ ಅಕ್ಕಿಯ ಆಫರ್ ಗೆ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹ ತೋರಿದ್ದಾರೆ.