ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಇದೀಗ ವಿಕಾಸ ಸೌಧಕ್ಕೂ ಶಾಲ್ ಕೊಟ್ಟಿದೆ. ಆಹಾರ ಇಲಾಖೆಯ ಮಹಿಳಾ ಸಿಬ್ಬಂಧಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನೆಲ ಮಹಡಿಯ ನಾಲ್ಕು ಕೊಠಡಿಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಆಹಾಯ ಇಲಾಖೆಯ ಮಹಿಳಾ ಸಿಬ್ಬಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆ ಶಿಫ್ಟ್ ಮಾಡಲಾಗಿದ್ದು, ಮಹಿಳಾ ಸಿಬ್ಬಂಧಿಯೊಂದಿಗೆ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಮಹಿಳಾ ಸಿಬ್ಬಂಧಿ ಕೆಲಸ ನಿರ್ವಹಿಸುತ್ತಿದ್ದ ಕಚೇರಿಯ ಎಡ ಹಾಗೂ ಬಲ ಭಾಗದ ಎರಡೆರಡು ಕೊಠಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ವಿಕಾಸ ಸೌಧಕ್ಕೆ ಕೊರೊನಾ ಶಾಕ್ ಕೊಡುತ್ತಿದ್ದಂತೆಯೇ, ವಿಧಾನ ಸೌಧದಕ್ಕೂ ಆತಂಕ ಎದುರಾಗಿದೆ. ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಸುಮಾಉ 5 ಸಾವಿರ ಮಂದಿ ಸಿಬ್ಬಂಧಿಗಳು ಕಾರ್ಯನಿರ್ವಹಿಸುತ್ತಿದ್ದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಾತ್ಕಾಲಿಕ ನಿಷೇಧವನ್ನು ಹೇರಬೇಕು. ಅಲ್ಲದೇ ವಿಕಾಸ ಸೌಧ ಹಾಗೂ ವಿಧಾನಸೌಧದಲ್ಲಿನ ಎಲ್ಲಾ ಸಿಬ್ಬಂಧಿಗಳಿಗೂ ಕೊರೊನಾ ಟೆಸ್ಟ್ ಮಾಡಿಸುವಂತೆ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೀಗ ವಿಧಾನ ಸೌಧಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.