ಬೆಂಗಳೂರು : ಕೊರೊನಾ ವೈರಸ್ ಇದೀಗ ಬೆಂಗಳೂರಲ್ಲಿ ಪತ್ತೆಯಾಗಿದೆ. ಅಮೇರಿಕಾದಿಂದ ಬಂದಿದ್ದ 40 ವರ್ಷದ ಇಂಜಿನಿಯರ್ ಓರ್ವರಿಗೆ ಕೊರೊನಾ ಸೊಂಕು ತಗುಲಿದ್ದು, ಅವರನ್ನು ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಕೊರೊನಾ ಸೊಂಕಿತ ವ್ಯಕ್ತಿಯ ಜೊತೆಗೆ ಪ್ರಯಾಣಿಸಿರೋ ಪ್ರಯಾಣಿಕರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಮಾಹಿತಿಯನ್ನು ನೀಡಿದ್ರು, ಮಾರ್ಚ್ 1 ರಂದು ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿರೋದನ್ನು ದೃಢಪಡಿಸಿದ್ದಾರೆ. ಕೊರೊನಾ ಪೀಡಿತ ವ್ಯಕ್ತಿಯ ಪತ್ನಿ, ಮಗು ಹಾಗೂ ಚಾಲಕನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸೋಂಕಿತರಿಗೆ ರಾಜೀವ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಶಾಲೆಗೆ ರಜೆ :
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರೊ ಬೆನ್ನಲ್ಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯ ನರ್ಸರಿ, ಪೂರ್ವ ಪ್ರಾಥಮಿಕ ಹಾಗೂ ಐದನೇ ತರಗತಿ ವರೆಗಿನ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಸಾರಿ ಸರ್ಕಾರ ಆದೇಶಿಸಿದೆ. ಈ ಕುರಿತು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೇ ಟ್ವಿಟ್ ಮಾಡಿದ್ದಾರೆ.