ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ 4 ಲಕ್ಷ ಪರಿಹಾರ : ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಕೊರೊನಾ‌ ವೈರಸ್ ಸೋಂಕಿನಿಂದ ಮೃತಪಟ್ಟ ಕುಟುಂಬ ಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಂ.ಆರ್.ಷಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಕುರಿತು ಸಲ್ಲಿಕೆಯಾಗಿದ್ದ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು  ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಮಜಾಯಿಷಿ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಮರಣ ಪ್ರಮಾಣ ಪತ್ರ ವಿತರಣೆ ಮಾಡಲು ರೂಪಿಸಿರುವ ಐಸಿಎಂಆರ್ ಮಾರ್ಗಸೂಚಿ ಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ತಿಳಿಸಿದೆ. 2005ರ ಡಿಸಾಸ್ಟರ್ ಮ್ಯಾನೆಜ್‍ಮೆಂಟ್ ಕಾಯ್ದೆಯಡಿ ಕೊರೊನಾ ಸೋಂಕಿನಿಂದ 4 ಲಕ್ಷ ಪರಿಹಾರಧನ ನೀಡಬೇಕು ಹಾಗೂ ಸೋಂಕಿನಿಂದ ಮೃತಪಟ್ಟವರಿಗೆ ಮರಣ ಪ್ರಮಾಣ ಪತ್ರ ವಿತರಿಸಲು ಏಕರೂಪಿ ಮಾರ್ಗಸೂಚಿ ರಚಿಸಬೇಕು ಎಂದು ಸಲ್ಲಿಕೆಯಾಗಿರುವ ಎರಡು ಪ್ರತ್ಯೆಕ ಪಿಐಎಲ್‍ಗಳ ಅರ್ಜಿ ವಿಚಾರಣೆ ಕೈಗೆತ್ತಿ ಕೊಂಡಿರುವ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಮರಣ‌ ಪ್ರಮಾಣ ಪತ್ರ ಲಭ್ಯವಾಗದಿದ್ದರೆ‌ ಅಂತವರು ಪರಿಹಾರ ಪ್ರಯೋಜನ‌ದಿಂದ ವಂಚಿತರಾಗಲು ಏಕರೂಪ ನೀತಿಗೆ‌ ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ. ವಿಚಾರಣೆಯನ್ನು ಜೂ.‌11ಕ್ಕೆ ಮುಂದೂಡಿಕೆ ಮಾಡಿದೆ.

Comments are closed.