ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿ ಬೆಂಗಳೂರಿನಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಇಂದು ಒಂದೇ ದಿನ ಮೂರು ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಿಲಿಕಾನ್ ಸಿಟಿಯಲ್ಲಿ ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 7 ಮಂದಿ ಸಾವವನ್ನಪ್ಪಿದ್ದರು. ಆದ್ರಿಂದು ಕೂಡ ಕೊರೊನಾ ತನ್ನ ಆರ್ಭಟವನ್ನು ಮುಂದುವರಿಸಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ. ಈ ಪೈಕಿ ಸೈಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 85 ವರ್ಷದ ವೃದ್ದನ ಆರಂಭಿಕ ಕೊರೊನಾ ವರದಿ ನೆಗೆಟಿವ್ ಬಂದಿತ್ತು, ಆದರೆ ನಂತರದ ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ಜಯನಗರ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ದರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇನ್ನು 45 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೂವರು ಕೂಡ ಇಂದು ಸಾವನ್ನಪ್ಪಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಆರಂಭದಲ್ಲಿ ಸೋಂಕಿತರ ಸಂಖ್ಯೆಯಷ್ಟೇ ಏರಿಕೆಯಾಗುತ್ತಿತ್ತು. ಆದ್ರೆ ಕಳೆದೊಂದು ವಾರದಿಂದಲೂ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದೊಂದು ವಾರದಿಂದಲೂ ಬರೋಬ್ಬರಿ 21 ಮಂದಿ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ರೆ, ಕಳೆದ 24 ಗಂಟೆಯ ಅವಧಿಯಲ್ಲಿ ಬರೋಬ್ಬರಿ 10 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.