ನವದೆಹಲಿ : ಕಳೆದೊಂದು ವಾರದಿಂದಲೂ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 1,65,553 ಲಕ್ಷ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 3,460 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕಳೆದಾರು ದಿನಗಳಿಂದಲೂ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಕೊರೊನಾ ಸೋಂಕಿನ ಪಾಸಿಟಿವಿಟಿ ರೇಟ್ ಕೂಡ ಶೇ.10ಕ್ಕಿಂತ ಕಡಿಮೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,65,553 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 2,78,94,800ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 2,54,54,32 ಮಂದಿಗೆ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದರೂ ಕೂಡ ಸಾವನ್ನಪ್ಪುವವರ ಸಂಖ್ಯೆ ಇಳಿಕೆಯಾಗಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 20,63,839 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೆ 21,20,66,614 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.