ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ : ಸುದ್ದಿಗೋಷ್ಠಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದೇನು ..?

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡುವುದಿಲ್ಲ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ತಾಂತ್ರಿಕ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸ್ಲಮ್ ಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಿದ್ದು, ಅಪಾರ್ಟ್ ಮೆಂಟ್ ಗಳಲ್ಲಿಯೇ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಅಪಾರ್ಟ್ ಮೆಂಟ್ ಗಳಲ್ಲಿ ಹೆಚ್ಚು ಲಸಿಕೆಯನ್ನು ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಸರಕಾರಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗಳಿಂದಲೂ ಬೆಡ್ ಒದಗಿಸುವಂತೆ ಸೂಚನೆಯನ್ನು ನೀಡಲಾಗಿದೆ. ರಾಜ್ಯದಲ್ಲಿ ಎರಡು ವಾರಗಳ ಕಾಲ ಜಾತ್ರೆ, ಮಹೋತ್ಸವಗಳಿಗೆ ರಾಜ್ಯ ಸರಕಾರ ಬ್ರೇಕ್ ಹಾಕಿದೆ. ಅಲ್ಲದೇ 2 ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ ಎಂದಿದ್ದಾರೆ.

https://kannada.newsnext.live/sri-ramasena-prasad-attavar-arrest-mangalore-cheating-case/

ಆದರೆ ಶಾಲೆ, ಕಾಲೇಜುಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಸಚಿವ ಸುರೇಶ್ ಕುಮಾರ್ ಅವರು ಒಂದು ದಿನಗಳ ಕಾಲಾವಕಾಶವನ್ನು ಕೇಳಿದ್ದಾರೆ ಎನ್ನಲಾಗುತ್ತಿದೆ.

Comments are closed.