ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿಯ ರೌದ್ರ ನರ್ತನ ರಾಜ್ಯದಲ್ಲಿ ಮುಂದುವರಿದಿದ್ದು, ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಮತ್ತೆ 5 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಮಂಡ್ಯದಲ್ಲಿ ಮುಂಬೈನಿಂದ ಬಂದಿದ್ದ ಮತ್ತೆ 4 ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಬೀದರ್ ನಗರ ಓಲ್ಡ್ ಸಿಟಿ ನಗರದಲ್ಲಿ ಮತ್ತೆ 4 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಗದಗ 4, ಬೀದರ್ 4, ದಾವಣಗೆರೆ 3, ಬಾಗಲಕೋಟೆ 1 ಹಾಗೂ ಬೆಳಗಾವಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದರೆ, ರಾಜ್ಯದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ಆರ್ಭಟಕ್ಕೆ ಕರ್ನಾಟಕ ತತ್ತರಿಸಿ ಹೋಗಿದೆ.