ಕೋಳಿ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು : ಶಿರಿಯಾರದ ಪಡುಮಂಡುವಿನಲ್ಲಿ ಮನೆ ಸೀಲ್ ಡೌನ್

0

ಬ್ರಹ್ಮಾವರ : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಇದೀಗ ಕೋಳಿ ಅಂಗಡಿಯ ಮಾಲೀಕನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿರಿಯಾರ ಗ್ರಾಮದ ಪಂಡುಮಂಡುವಿನಲ್ಲಿರುವ ಸೋಂಕಿತ ವ್ಯಕ್ತಿಯ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಶಿರಿಯಾರದಲ್ಲಿ ಕೋಳಿ ಅಂಗಡಿಯನ್ನು ನಡೆಸಿಕೊಂಡು ಹೋಗುತ್ತಿದ್ದ 52 ವರ್ಷದ ವ್ಯಕ್ತಿಗೆ ಕೆಲ ದಿನಗಳಿಂದ ಶೀತ, ಕೆಮ್ಮದ ಲಕ್ಷಣಗಳು ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ವ್ಯಕ್ತಿಯ ಗಂಟಲು ದ್ರವದ ಪರೀಕ್ಷೆಯನ್ನು ನಡೆಸಿದಾಗ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೋಟ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೋಂಕಿತ ವ್ಯಕ್ತಿಯ ಮನೆಯನ್ನು ಸೀಲ್ ಡೌನ್ ಮಾಡಿ, ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದೆ.

ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸೋಂಕಿನ ವ್ಯಕ್ತಿಯ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿರುವ 9 ಮಂದಿಯ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು, ಎಲ್ಲರನ್ನೂ ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಮಾಡಲಾಗುತ್ತಿದೆ. ಅಲ್ಲದೇ ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮನೆಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

Leave A Reply

Your email address will not be published.