ಮಕ್ಕಳಿಗೂ ಕೊರೊನಾ ಲಸಿಕೆ : ಜೂನ್ ನಿಂದ ಕೊವ್ಯಾಕ್ಸಿನ್ ಪ್ರಯೋಗ

ನವದೆಹಲಿ : ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗಿತ್ತಿದೆ. ಇದೀಗ 2-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಪ್ರಯೋಗ ಜೂನ್ ನಿಂದ ಆರಂಭವಾಗುವ ಸಾಧ್ಯತೆಯಿದೆ. ಭಾರತ್ ಬಯೋಟಿಕ್ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆಯನ್ನು ಸಿದ್ದಪಡಿಸಿ ಪ್ರಯೋಗ ನಡೆಸಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಮೂರನೇ ಅಲೆ ಮಕ್ಕಳನ್ನು ಕಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗಕ್ಕೆ ಕೇಂದ್ರ ಸರಕಾರ ಚಿಂತನೆಯನ್ನು ನಡೆಸುತ್ತಿದೆ. ಈಗಾಗಲೇ ಭಾರತ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ಲಸಿಕೆಯನ್ನು ಸಿದ್ದಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಹೈದ್ರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆ ಜಂಟಿಯಾಗಿ ಲಸಿಕೆಯನ್ನು ಸಂಶೋಧಿಸಿದೆ.

ಸಿದ್ದಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಈಗಾಗಲೇ 525 ಮಂದಿಯ ಮೇಳೆ ಪ್ರಯೋಗ ನಡೆಸಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದುಕೊಳ್ಳಲು ಸಿದ್ದತೆ ನಡೆಸಲಾಗಿದೆ. ಕೇಂದ್ರ ಸರಕಾರ 1500 ಕೋಟಿ ರೂಪಾಯಿಯನ್ನು ಲಸಿಕೆ ಉತ್ಪಾದನೆಗೆ ಹೂಡಿಕೆ ಮಾಡಿದ್ದು, ಬೆಂಗಳೂರು ಮತ್ತು ಗುಜರಾತ್ ಘಟಕಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ಉತ್ಪಾದನೆ ಮಾಡಲಾಗುತ್ತಿದೆ ಎಂದು ಭಾರತ್ ಬಯೋಟೆಕ್ ನ ಡಾ.ರಾಚೆಸ್ ಎಲ್ಲಾ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಅಬ್ಬರ ಕೊಂಚ ಪ್ರಮಾಣದಲ್ಲಿ ತ‍‍ಗ್ಗಿದ್ದರೂ ಕೂಡ ಮೂರನೆ ಅಲೆಯ ಆತಂಕ ಜನರನ್ನು ಕಾಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅನುಮತಿ ಲಭ್ಯವಾದ್ರೆ ಜೂನ್ ತಿಂಗಳಲ್ಲಿಯೇ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಆರಂಭಗೊಳ್ಳಲಿದೆ.

Comments are closed.