Corona Death : ಕೊರೊನಾದಿಂದ ಮೃತಪಟ್ಟವರಿಗೆ 30 ದಿನದಲ್ಲಿ ಪರಿಹಾರ ನೀಡಿ : ಸುಪ್ರೀಂ ಕೋರ್ಟ್‌

ನವದೆಹಲಿ : ಕೊರೊನಾದಿಂದ ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಕುಟುಂಬಸ್ಥರು ಪರಿಹಾರಕ್ಕೆ ಅರ್ಜಿ ಸಲ್ಲಿಸಿದ 30 ದಿನದೊಳಗೆ 50 ಸಾವಿರ ರೂ. ಪರಿಹಾರವನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸೂಚನೆಯನ್ನು ನೀಡಿದೆ.

ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ಕೋವಿಡ್ -19 ಎಂಬುದು ನಮೂದಾಗಿಲ್ಲ ಎಂಬ ಕಾರಣಕ್ಕೆ ಯಾವುದೇ ರಾಜ್ಯವು 50,000 ರೂ.ಗಳ ಪ್ರಯೋಜನವನ್ನು ನಿರಾಕರಿಸುವಂತಿಲ್ಲ. ಪರಿಹಾರದ ಮೊತ್ತವನ್ನು ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ವಿತರಿಸಬೇಕು ಎಂದು ಸುಪ್ರಿಂಕೋರ್ಟ್ ಹೇಳಿದೆ.

ಇದನ್ನೂ ಓದಿ: Covid -19: ಮಕ್ಕಳಿಗೆ 10,000 ಕೋವಿಡ್ ಕಿಟ್‌ ಉಚಿತ ವಿತರಣೆ : 3 ಅಲೆ ತಡೆಗೆ ಕೇಂದ್ರದ ಸಿದ್ದತೆ

ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರಿಹಾರವನ್ನು ನೀಡಬೇಕು ಮತ್ತು ಪರಿಹಾರ ನೀಡುವ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಹೆಚ್ಚಾಗಿ ಪ್ರಚಾರ ಮಾಡಬೇಕು ಎಂದು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನ್ಯಾ. ಎಂ.ಆರ್.ಶಾ ನೇತೃತ್ವದ ಪೀಠ ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಆಯಾ ರಾಜ್ಯಗಳು ಕೊರೊನಾದಿಂದ ಸಾವನ್ನಪ್ಪಿರುವ ಕುಟುಂಬಗಳಿಗೆ ಪರಿಹಾರ ನೀಡಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದ್ದು, ಭಾರತದಲ್ಲಿ ಇಲ್ಲಿವರೆಗೆ 4.45 ಲಕ್ಷ ಜನರು ಕೋವಿಡ್​ನಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನೀಡಿತ್ತು. ಜೊತೆಗೆ ಎಲ್ಲ ರಾಜ್ಯಗಳು 50 ಸಾವಿರ ರೂ. ಪರಿಹಾರ ನೀಡಲಿವೆ ಎಂದು ತಿಳಿಸಿದೆ.

ಇದನ್ನೂ ಓದಿ: ಅಕ್ಟೋಬರ್‌ನಲ್ಲಿ ಮಕ್ಕಳಿಗೆ ವ್ಯಾಕ್ಸಿನ್‌ : ಶಾಲೆಗಳಲ್ಲಿ ತುಂಬಾ ಎಚ್ಚರಿಕೆ ಅಗತ್ಯ : ಆರೋಗ್ಯ ಸಚಿವ ಸುಧಾಕರ್‌

(Relief for Coroner’s death in 30 days: Supreme Court)

Comments are closed.