ಕೊರೊನಾ‌ ಸೋಂಕಿತ ಮಹಿಳೆ ಮೇಲೆ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಯತ್ನ : ಪ್ರಶ್ನಿಸಿದ ಕುಟುಂಬಸ್ಥರ ಮೇಲೆ ಹಲ್ಲೆ

ಗ್ವಾಲಿಯರ್ : ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿ ದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಯಲ್ಲಿ ಮಹಿಳೆ ಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ‌ ವಾರ್ಡ್ ಬಾಯ್‌ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಗೆ ಎಚ್ಚರವಾಗುತ್ತಿದ್ದಂತೆಯೇ ಕಾಮುಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಕ್ರಮ ಕೈಗೊಳ್ಳ ಬೇಕಾದ ಆಸ್ಪತ್ರೆಯ ಸಿಬ್ಬಂದಿ ಮಹಿಳೆಯ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮಹಿಳೆಗೆ ಚಿಕಿತ್ಸೆ ನೀಡುವುದನ್ನು  ನಿಲ್ಲಿಸಿ ದ್ದಾರೆ ಎಂದು ಮಹಿಳೆಯ ಮಾವ ಆರೋಪಿಸಿದ್ದಾರೆ.

ಈ ಕುರಿತು ಕಾಂಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿ ದಂತೆ ಆಸ್ಪತ್ರೆಯ ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Comments are closed.