ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿದ‌ ನರ್ಸ್ : ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು

ಭೋಪಾಲ್ : ಕೊರೊನಾ ಪಾಸಿಟಿವ್ ಮಹಿಳೆಯ ಮೇಲೆ ನರ್ಸ್ ವೋರ್ವ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಕೆಲವೇ ಗಂಟೆಯಲ್ಲಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೊನಾ ವೈರಸ್ ಸೊಂಕು ದೃಢಪಟ್ಟ ಹಿನ್ನೆಲೆಯಲ್ಲಿ 43 ವರ್ಷದ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನರ್ಸ್ ಓರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಮಹಿಳೆ ಹಿರಿಯ ವೈದ್ಯರಿಗೆ ವಿಷಯವನ್ನು ತಿಳಿಸಿದ್ದಾಳೆ.

ಅತ್ಯಾಚಾರದ ವೆಸಗಿದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಕೂಡಲೇ ಆಕೆಯನ್ನು ವೆಂಟಿಲೇಟರ್ ಗೆ ಶಿಫ್ಟ್  ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದಾಳೆ.

ಅರೋಪಿ ಸಂತೋಷ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಆದರೆ ಮಹಿಳೆ ಅತ್ಯಾಚಾರದಿಂದಲೇ ಸಾವನ್ನಪ್ಲಿದ್ಲಾ, ಇಲ್ಲಾ ಕೊರೊನಾದಿಂದ ಸಾವನ್ನಪ್ಲಿರೋದಾ ಅನ್ನೊ ಕುರಿತು ಭೋಪಾಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.