Covid Report : ಕೇರಳಿಗರಿಗೆ ಕೊರೊನಾ ಟೆಸ್ಟ್‌ ರಿಪೋರ್ಟ್‌ ಕಡ್ಡಾಯ : ಕೇಂದ್ರ, ರಾಜ್ಯ ಸರಕಾರಗಳಿಗೆ ಕೇರಳ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಕೇರಳಿಗರು ಕರ್ನಾಟಕಕ್ಕೆ ಪ್ರವೇಶಿಸಲು ಕೋವಿಡ್‌ ನೆಗೆಟಿವ್‌ ವರದಿ ಕಡ್ಡಾಯವೆಂದು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲೀಗ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕೇಂದ್ರ ಆರೋಗ್ಯ ಸಚಿವಾಲಯದ ಪ್ರತಿನಿಧಿಗಳಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದ್ದು, ಹೈಕೋರ್ಟ್ ಗೆ ಆಗಸ್ಟ್ 17 ರಂದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.

ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ರಿಪೋರ್ಟ್‌ ಹಾಗೂ ಕೊರೊನಾ ಲಸಿಕೆ ಪಡೆದ ಪ್ರಮಾಣ ಪತ್ರ ತರುವಂತೆ ಆದೇಶ ಹೊರಡಿಸಿತ್ತು. ಕರ್ನಾಟಕ ಮತ್ತು ಕೇರಳ ನಡುವಿನ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡುವಂತೆ ಕೇರಳದ ಸಿಪಿಎಂ ಮುಖಂಡ ದಯಾನಂದ್ ಎಂಬುವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಕರ್ನಾಟಕ ಸರ್ಕಾರ, ಕೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

Comments are closed.