Cow National animal : ಹಸುವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಿ ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ( Cow National animal ) ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಗೋವಂಶ ಸೇವಾ ಸದನ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಸೋಮವಾರ ಅರ್ಜಿಯ ಕುರಿತಾಗಿ ವಿಚಾರಣೆ ನಡೆಸಿದ. ಜಸ್ಟೀಸ್ ಎಸ್. ಕೆ. ಕೌಲ್ ಹಾಗೂ ಅಭಯ್ ಎಸ್. ಓಕಾ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿದ್ದು, ಈ ರೀತಿಯ ಘೋಷಣೆ ಮಾಡದೇ ಇರುವ ಕಾರಣ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಇದು ನ್ಯಾಯಾಲಯದ ಕೆಲಸವೇ ಎಂದು ಪ್ರಶ್ನಿಸಿದ ನ್ಯಾಯಪೀಠ, ಈ ರೀತಿಯ ಅರ್ಜಿಗಳನ್ನು ಸಲ್ಲಿಸುವ ಕಾರಣವಾದರೂ ಏನು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ(Cow National animal) ಎಂದು ಘೋಷಣೆ ಮಾಡಿಲ್ಲದ ಕಾರಣ ಯಾವ ಮೂಲಭೂತ ಹಕ್ಕು ಉಲ್ಲಂಘನೆ ಆಗಿಲ್ಲ.ನೀವು ನ್ಯಾಯಾಲಯದ ಕದ ತಟ್ಟುತ್ತಿದ್ದೀರಿ ಎನ್ನುವ ಕಾರಣಕ್ಕೆ ನಾವು ನಮ್ಮ ಕಾನೂನನ್ನು ಗಾಳಿಗೆ ತೂರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ : 185 people died : ಇರಾನ್‌ ನಲ್ಲಿ ಉಗ್ರಸ್ವರೂಪ ತಾಳಿತು ಹಿಜಾಬ್‌ ವಿರೋಧಿ ಪ್ರತಿಭಟನೆ ; 19 ಮಕ್ಕಳು ಸೇರಿ 185 ಮಂದಿ ಬಲಿ

ಎಂದು ಘೋಷಣೆ ಮಾಡಿಲ್ಲದ ಕಾರಣ ಯಾವ ಮೂಲಭೂತ ಹಕ್ಕು ಉಲ್ಲಂಘನೆ ಆಗಿಲ್ಲ.ನೀವು ನ್ಯಾಯಾಲಯದ ಕದ ತಟ್ಟುತ್ತಿದ್ದೀರಿ ಎನ್ನುವ ಕಾರಣಕ್ಕೆ ನಾವು ನಮ್ಮ ಕಾನೂನನ್ನು ಗಾಳಿಗೆ ತೂರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ : Hijab controversy : ಶಾಲೆಗಳಲ್ಲೂ ಹಿಜಾಬ್‌ ವಿರೋಧಿ ಪ್ರತಿಭಟನೆ : 2 ಬಲಿ

ಈ ವೇಳೆ ಅರ್ಜಿದಾರರ ಪರವಾಗಿ ದಾಖಲೆ ಸಲ್ಲಿಸಿದ ಅವರ ವಕೀಲರು, ಗೋ ಸಂರಕ್ಷಣೆ ಅತಿ ಮುಖ್ಯ ಎನ್ನುವ ವಿಷಯಕ್ಕೆ ಕುರಿತಾಗಿ ಅದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಿದರು.ಈ ವೇಳೆ ನ್ಯಾಯಪೀಠ, ಅರ್ಜಿಯನ್ನು ಹಿಂತೆಗೆದುಕೊಳ್ಳುವಾಗ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ : Babiya crocodile died : ಅನಂತಪದ್ಮನಾಭ ದೇವಸ್ಥಾನದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಬೇಕಿದೆ, ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಗೋವಂಶ ಸೇವಾ ಸದನ ಎಂಬ ಎನ್‌ಜಿಒ ಸಂಸ್ಥೆಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸುವ ವೇಳೆ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ಹಿಂಪಡೆಯುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ

(Cow National animal) The Supreme Court rejected the petition filed by Govhamsa Seva Sadan to direct the central government to declare the cow as the national animal.

Comments are closed.