Crime News : ಪೈನಾಪಲ್​ ನಲ್ಲಿ ಸ್ಫೋಟಕ ತುಂಬಿ ಗರ್ಭಿಣಿ ಆನೆ ಕೊಂದ ಪ್ರಕರಣ : ಒಂದೂವರೆ ವರ್ಷದ ಬಳಿಕ ಆರೋಪಿ ಅರೆಸ್ಟ್‌

ಕೇರಳ : ಒಂದೂವರೆ ವರ್ಷದ ಹಿಂದೆ ಕೇರಳದ ತಿರುವನಂತಪುರಂನಲ್ಲಿ ಪೈನಾಪಲ್​ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅನೇಕರು ಕಂಬನಿ ಮಿಡಿದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದರು. ಈ ಘಟನೆಯ ಬೆನ್ನಲ್ಲೇ ಒಂದಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ ಎರಡನೇ ಆರೋಪಿ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಕಾಡು ಹಂದಿಯನ್ನು ಕೊಲ್ಲಲು ರೂಪಿಸಿದ ಬಲೆಗೆ ಆನೆ ಸಿಲುಕಿ ನರಳಿ ನರಳಿ ಮೃತಪಟ್ಟಿತು. ಕೊನೆಗೂ ಘಟನೆಯ ಪಶ್ಚಾತಾಪದಿಂದ ಆರೋಪಿ ಕೇರಳದ ಮುನ್ಸಿಫ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ ಮುಂದೆ ಅ.16ರಂದು ಶರಣಾಗಿದ್ದಾನೆ. ಆರೋಪಿಯನ್ನು ರಿಯಾಜುದ್ದೀನ್​ (38) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ

ರಿಯಾಜುದ್ದೀನ್​ 2020 ಜೂನ್​ ತಿಂಗಳಿನಿಂದ ನಾಪತ್ತೆಯಾಗಿದ್ದ. ಸುಮಾರು ಒಂದೂವರೆ ವರ್ಷದ ಬಳಿಕ ಕೋರ್ಟ್​ಗೆ ಶರಣಾಗಿದ್ದಾನೆ. ರಿಯಾಜುದ್ದೀನ್​ ತಂದೆ ಅಬ್ದುಲ್​ ಕರೀಮ್​ ಪ್ರಕರಣದ ಮೊದಲ ಆರೋಪಿ ಆಗಿದ್ದು, ಈಗಲೇ ನಾಪತ್ತೆಯಾಗಿದ್ದಾರೆ. ಆರೋಪಿ ರಿಯಾಜುದ್ದೀನ್​ನನ್ನು ಅರಣ್ಯ ಇಲಾಖೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ.

15 ವರ್ಷದ ಗರ್ಭಿಣಿ ಆನೆಯು ಹಸಿವಿನಿಂದ ಸ್ಫೋಟಕ ತುಂಬಿದ ಪೈನಾಪಲ್​ ತಿನ್ನಲು ಯತ್ನಿಸಿದಾಗ, ಸ್ಫೋಟಕ ಬಾಯಲ್ಲೇ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ಆನೆ ಕೆಲ ದಿನಗಳವರೆಗೆ ನರಳಿ ಕೊನೆಗೂ ಮೃತಪಟ್ಟಿತ್ತು. ಬಳಿಕ ಅದರ ಅಂತಿಮ ಸಂಸ್ಕಾರವನ್ನು ಅರಣ್ಯ ಇಲಾಖೆ ನೆರವೇರಿಸಿತ್ತು. ಇದಾದ ಬಳಿಕ ಬಂದ ಮರಣೋತ್ತರ ವರದಿಯಲ್ಲಿ ಆನೆಯು ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂದಿತ್ತು.

ನೋವನ್ನು ತಡೆಯಲಾಗದೇ ಆನೆ ನದಿಯ ಒಳಗೆ ಹೋಗಿ ನಿಂತಿತ್ತು. ಕೊನೆಗೆ ನರಳಿ ಆನೆ ಪ್ರಾಣ ಬಿಟ್ಟಿತು. ಇದಾದ ಬಳಿಕ ಆನೆ ಸಾವಿನ ಕೇವಲ ಕೇರಳ ರಾಜ್ಯ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಪ್ರಾಣಿ ಪ್ರಿಯರು, ಪ್ರಾಣಿ ದಯಾ ಸಂಘ ಸೇರಿದಂತೆ ಎಲ್ಲರೂ ಆಕ್ರೋಶ ಹೊರಹಾಕಿದ್ದರು. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ ಮಾಡಿದ್ದರು.

ಇದನ್ನೂ ಓದಿ: Crime News : ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಆರೋಪಿಗಳ ಬಗ್ಗೆ ಮತ್ತು ಅವರ ಬಂಧನ ಮತ್ತು ಶಿಕ್ಷೆಯ ಬಗ್ಗೆ ಮಾಹಿತಿ ನೀಡಿದರೆ, ರೂ .50,000 ವರೆಗೆ ಬಹುಮಾನ ಸಹ ನೀಡುವುದಾಗಿ ಹ್ಯೂಮನ್ ಸೊಸೈಟಿ ಇಂಟರ್‌ನ್ಯಾಷನಲ್ ಆಫರ್​ ನೀಡಿತ್ತು. ಇದೀಗ ಆರೋಪಿಯೇ ಪಶ್ಚಾತಾಪದಿಂದ ನ್ಯಾಯಲಯದ ಮುಂದೆ ಶರಣಾಗಿದ್ದಾನೆ.

(Accused arrested after one-and-a-half years in pineapple case of explosive-filled pregnant elephant)

Comments are closed.