Crime News : ಬರ್ತ್‍ಡೇ ಪಾರ್ಟಿ ನೆಪದಲ್ಲಿ ವೈದ್ಯೆ ಮೇಲೆ ಅತ್ಯಾಚಾರ

ನವದೆಹಲಿ : ಬರ್ತಡೇ ಪಾರ್ಟಿಗೆ ತೆರಳಿದ್ದ ವೇಳೆಯಲ್ಲಿ ಸಹೋದ್ಯೋಗಿಯೋರ್ವ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲಲಿ ನಡೆದಿದೆ.

ಏಮ್ಸ್ ವಸತಿ ಸಮುಚ್ಚದಲ್ಲಿ ವಾಸಿಸುತ್ತಿದ್ದ ಆರೋಪಿಗೆ ಈಗಾಗಲೇ ಮದುವೆಯಾಗಿತ್ತು. ಪತ್ನಿ ಹಾಗೂ ಮಕ್ಕಳು ತವರಿಗೆ ತೆರಳಿದ್ದರು. ಈ ವೇಳೆಯಲ್ಲಿ ತನ್ನ ಮನೆಯಲ್ಲಿ ಆರೋಪಿ ಬರ್ತಡೇ ಪಾರ್ಟಿಯನ್ನು ಆಯೋಜಿಸಿದ್ದ. ವೈದ್ಯೆಯ ಜೊತೆಗೆ ಇತರ ಸಹೋದ್ಯೋಗಿಗಳು ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಪಾರ್ಟಿಯ ವೇಳೆಯಲ್ಲಿ ಆರೋಪಿ ಹಾಗೂ ವೈದ್ಯೆ ಮದ್ಯ ಸೇವನೆಯನ್ನು ಮಾಡಿದ್ದರು.

ಪಾರ್ಟಿ ಮುಗಿಯುವಾಗ ತಡರಾತ್ರಿಯಾದ ಹಿನ್ನೆಲೆಯಲ್ಲಿಆ ರಾತ್ರಿ ವೈದ್ಯೆ ಸಹೋದ್ಯೋಗಿಯ ಮನೆಯಲ್ಲಿಯೇ ಉಳಿದುಕೊಂಡಿದ್ದರು. ಆದರೆ ತಡರಾತ್ರಿ ಆರೋಪಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಅಂತಾ ವೈದ್ಯೆ ಇದೀಗ ಹೌಜ್ ಖಾಸ್ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಕಳೆದ ಸೆಪ್ಟೆಂಬರ್ 26ರಂದು ಈ ಘಟನೆ ನಡೆದಿದ್ದು, ಅಕ್ಟೋಬರ್ 11 ರಂದು ವೈದ್ಯೆ ಸಹೋದ್ಯೋಗಿಯ ವಿರುದ್ದ ದೂರು ದಾಖಲು ಮಾಡಿದ್ದಾರೆ. ಆರೋಪಿ ಸದ್ಯ ತಲೆ ಮರೆಯಿಸಿ ಕೊಂಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಇತರ ವೈದ್ಯರನ್ನೂ ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ :

ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

 75 ಲಕ್ಷಕ್ಕೆ ಸಬ್‌ಇನ್ಸ್ಪೆಕ್ಟರ್‌ ಹುದ್ದೆ ! ತಂದೆ, ಮಗಳಿಗೆ ವಂಚಿಸಿದ ಸ್ನೇಹಿತ

Comments are closed.