CRPF Exam: ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ `CRPF’ ಪರೀಕ್ಷೆ

ನವದೆಹಲಿ : (CRPF Exam) ಭಾರತದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪೈಕಿ ದೊಡ್ಡ ಪಡೆಯಾದ ಕೇಂದ್ರ ಮೀಸಲು ಪೊಲೀಸ್‌ ಪಡೆಯ ನೇಮಕಾತಿ ಪರೀಕ್ಷೆ ನಡೆದಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲಿಷ್‌ ನಲ್ಲಿಯೇ ಪರೀಕ್ಷೆ ಬರೆಯಲು ತಿಳಿಸಲಾಗಿದ್ದು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಒದಗಿಸಿಲ್ಲ. ಈ ಹಿನ್ನಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣವೇ ಸಡಿಲಿಸಿ ಎಂದು ಮೋದಿ ಅವರಿಗೆ ಕೇಂದ್ರಕ್ಕೆ ಆಗ್ರಹಿಸಲಾಗಿತ್ತು. ಇದಕ್ಕೆ ಮಣಿದ ಕೆಂದ್ರ ಸರಕಾರ ಕನ್ನಡಿಗರಿಗೆ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ಸಚಿವಾಲಯ ನಿರ್ಧರಿಸಿದೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನವಷ್ಟೇ. ಕನ್ನಡ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರು ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರಕಾರ ನಡೆಸುತ್ತಿರುವ ಪರೀಕ್ಷೆಯಲ್ಲು ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯದ ನಡೆಯೆಂದು ಕರ್ನಾಟಕದ ರಾಜಕೀಯ ಕಲಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಪ್ರಾದೇಶಿಕ ಭಾಷೆಯನ್ನು ಉತ್ತೇಜಿಸಲು ಮತ್ತು ಸ್ಥಳೀಯ ಯುವಕರು CAPF ಗೆ ಸೇರಲು ಅವಕಾಶ ಮಾಡಿಕೊಡುವ ಸಲುವಾಗಿ CRPF’ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಪರೀಕ್ಷೆಯನ್ನು ಜನವರಿ 1, 2024 ರಿಂದ ನಡೆಸಲಾಗುತ್ತದೆ.

ಪ್ರವೇಶ ಪರೀಕ್ಷೆಗೆ ಅನುಮೋದಿಸಲಾದ ಭಾಷೆಗಳು :
ಅಸ್ಸಾಮಿ
ಬೆಂಗಾಲಿ
ಗುಜರಾತಿ
ಮರಾಠಿ
ಮಲಯಾಳಂ
ಕನ್ನಡ
ತಮಿಳು
ತೆಲುಗು
ಒಡಿಯಾ
ಉರ್ದು
ಪಂಜಾಬಿ
ಮಣಿಪುರಿ
ಕೊಂಕಣಿ

ಇದನ್ನೂ ಓದಿ : Mumbai accident : ಭೀಕರ ಬಸ್‌ ಅಪಘಾತ : 12 ಮಂದಿ ಸಾವು, 27 ಮಂದಿಗೆ ಗಾಯ

ಇದನ್ನೂ ಓದಿ : India Active covid cases: ಭಾರತದಲ್ಲಿ ಹೆಚ್ಚಿದ ಕೊರೊನಾ ಭೀತಿ : 53 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣ

ಈ ನಿರ್ಧಾರವು ತಮ್ಮ ಮಾತೃಭಾಷೆ/ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯಲು ಮತ್ತು ಅವರ ಆಯ್ಕೆಯ ಭವಿಷ್ಯವನ್ನು ಸುಧಾರಿಸಲು ಬಯಸುವ ಲಕ್ಷಾಂತರ ಆಕಾಂಕ್ಷಿಗಳಿಗೆ ಜೀವಸೆಲೆಯನ್ನು ಸಾಬೀತುಪಡಿಸುತ್ತದೆ. ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಸಿಬ್ಬಂದಿ ಆಯ್ಕೆ ಆಯೋಗವು ಬಹು ಭಾರತೀಯ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುವಂತೆ ಅಸ್ತಿತ್ವದಲ್ಲಿರುವ ಒಪ್ಪಂದಕ್ಕೆ ಸಹಿ ಹಾಕುತ್ತದೆ. ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಕಾನ್ಸ್‌ಟೇಬಲ್ ಜಿಡಿ ಒಂದಾಗಿದೆ, ಇದು ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತದೆ.

CRPF Exam: Good news for Kannadigas: ‘CRPF’ exam in 13 languages including Kannada

Comments are closed.