Mangalore airport : ಮಂಗಳೂರು ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು : ವಿದೇಶದಿಂದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ‌ ( Mangalore airport ) ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 681 ಗ್ರಾಂ ತೂಕದ 34,32,240 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವ್ಯಕ್ತಿಯೋರ್ವನನ್ನು ಪರಿಶೀಲನೆ ನಡೆಸುವ ವೇಳೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಪತ್ತೆಯಾಗಿದೆ. ವ್ಯಕ್ತಿಯು ಚಿನ್ನವನ್ನು ಪೇಸ್ಟ್‌ ರೂಪಕ್ಕೆ ಪರಿವರ್ತಿಸಿ, ಅದನ್ನು ದೇಹದಲ್ಲಿಟ್ಟು ಸಾಗಾಟ ಮಾಡುತ್ತಿದ್ದ. ಅನುಮಾನಗೊಂಡ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆಯಲ್ಲಿ ಚಿನ್ನ ಕಳವು ಮಾಡುತ್ತಿರುವುದು ಪತ್ತೆಯಾಗಿದೆ. ಇದೀಗ ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿದೇಶಗಳಿಂದ ಚಿನ್ನವನ್ನು ನಾನಾ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಬಯಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ : ಆಂಧ್ರಪ್ರದೇಶದಲ್ಲಿ ಭಾರೀ ಮಳೆ : ತಿರುಪತಿ ದೇವಸ್ಥಾನದ ಆವರಣದಲ್ಲಿ ಭಾರೀ ಪ್ರವಾಹ

ಇದನ್ನೂ ಓದಿ : ವಿಶ್ವ ಶೌಚಾಲಯ ದಿನಾಚರಣೆ : 3.6 ಶತಕೋಟಿ ಜನರಿಗಿಲ್ಲ ಶೌಚಾಲಯ !

( Customs officials seized gold worth Rs 34.32 lakh at Mangalore airport )

Comments are closed.