ನವದೆಹಲಿ: Cyclone alert: ಈಗಾಗಲೇ ಮಾಂಡೌಸ್ ಚಂಡಮಾರುತ ದೇಶದ ಹಲವು ಭಾಗಗಳಲ್ಲಿ ನಷ್ಟ ಉಂಟುಮಾಡುತ್ತಿದೆ. ಈ ಬೆನ್ನಲ್ಲೇ ನಾಳೆಯಿಂದ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಮಾಂಡೌಸ್ ಚಂಡಮಾರುತದಿಂದ ಸಂಕಷ್ಟಕ್ಕೊಳಗಾಗಿರುವ ಜನರು ಮತ್ತೊಂದು ಚಂಡಮಾರುತವನ್ನು ಎದುರಿಸುವ ಆತಂಕದಲ್ಲಿದ್ದಾರೆ.
ಮಾಂಡೌಸ್ ಚಂಡಮಾರುತದ ಅಬ್ಬರದಿಂದಾಗಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಹಲವಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಾಳೆಯವರೆಗೆ ಈ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ನಾಳೆ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತದ ಪರಿಚಲನೆ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಈ ಚಂಡಮಾರುತವು ಭಾರತದ ಕರಾವಳಿಯಿಂದ ಪಶ್ಚಿಮ- ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: Mandous Cyclone Effect : ಮಾಂಡೌಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಚಳಿಗಾಳಿ, ಎಚ್ಷರಿಕೆ ಕೊಟ್ಟ ಆರೋಗ್ಯ ಸಚಿವ
ಈ ಹೊಸ ಚಂಡಮಾರುತ ಅಪ್ಪಳಿಸಿದಲ್ಲಿ ಡಿಸೆಂಬರ್ 14 ಮತ್ತು 15ರಂದು ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಭಾರೀ ಮಳೆಯಲಾಗಲಿದೆ. ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಇಂದು ಕೂಡಾ ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಮಳೆ ಮುಂದುವರೆದಿದೆ. ಇಂದು ಮತ್ತು ನಾಳೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಮತ್ತು ಕೇರಳ- ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕೀ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಇಂದು ಮತ್ತು ನಾಳೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್, ಕೇರಳ- ಕರ್ನಾಟಕ ಕರಾವಳಿಯ ಉದ್ದಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಡಿ.9ರಂದು ಬಂಗಾಳ ಕೊಲ್ಲಿಯಿಂದ ಹೊರಟಿದ್ದ ಮಾಂಡೌಸ್ ಚಂಡಮಾರುತವು ಚೆನ್ನೈನಿಂದ 30 ಕಿ.ಮೀ ದೂರದಲ್ಲಿರುವ ಮಾಮಲ್ಲಪುರಂನಲ್ಲಿ ಭೂಕುಸಿತ ಉಂಟುಮಾಡಿತ್ತು. ಅಲ್ಲದೇ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಅಪಾರ ಪ್ರಮಾಣದ ನಷ್ಟವನ್ನು ತಂದಿಟ್ಟಿತ್ತು. ಇಂದು ಕೂಡಾ ತಮಿಳುನಾಡಿನ ಹಲವೆಡೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಇತ್ತ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಡಿ.16ರವರೆಗೆ ಮಳೆ ಮುಂದುವರೆಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
Cyclone alert: Another cyclone seems to hit from tomorrow after Mandous