ಮಹಾರಾಷ್ಟ್ರ: ಪಪ್ಪಾಯ ತುಂಬಿದ ಲಾರಿ ಪಲ್ಟಿಯಾಗಿ 16 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಯವಾಲ್ ತಾಲ್ಲೂಕಿನ ಕಿಂಗ್‌ವಾನ್ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರೆಲ್ಲರೂ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರಾವರ್‌ನ ಕಾರ್ಮಿಕರಾಗಿದ್ದಾರೆ. ಭಾನುವಾರ ರಾತ್ರಿ ವಾಹನ ಪಲ್ಟಿಯಾಗಿ 7 ಪುರುಷರು, 6 ಮಹಿಳೆಯರು ಮತ್ತು 2 ಮಕ್ಕಳು ಮೃತಪಟ್ಟಿದ್ದಾರೆ. 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಕಿಂಗ್ ವಾನ್ ಗ್ರಾಮದಲ್ಲಿನ ದೇವಾಲಯದಲ್ಲಿ ಬಳಿಯಲ್ಲಿ ಪಪ್ಪಾಯ ತುಂಬಿದ ಟ್ರಕ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.