Delhi Mundka Fire : ದೆಹಲಿಯಲ್ಲಿ ಭಾರೀ ಅಗ್ನಿ ದುರಂತ : 2 ಅಗ್ನಿಶಾಮಕ ಸಿಬ್ಬಂದಿ ಸೇರಿ 27 ಮಂದಿ ಸಾವು, ಕಟ್ಟಡ ಮಾಲೀಕ ಪರಾರಿ

ನವದೆಹಲಿ : ಪಶ್ಚಿಮ ದಿಲ್ಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ (Delhi Mundka Fire)ಸಂಭವಿಸಿದ ಭಾರೀ ಬೆಂಕಿಯಲ್ಲಿಒಟ್ಟು 27 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದ್ದಾರೆ. ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಹಲವು ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್‌ಗಳನ್ನು ತಯಾರಿಸುವ ಕಂಪನಿಯನ್ನು ಹೊಂದಿದ್ದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ಸಂಜೆ 4.40 ರ ಬೆಂಕಿ ಕಾಣಿಸಿಕೊಳ್ಳುತ್ತಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ಕ್ರೇನ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಮಭಿಸಿದ್ದಾರೆ. ಸಂಜೆಯಿಂದ ಆರಂಭಗೊಂಡ ಕಾರ್ಯಾಚರಣೆ ಹಲವು ಗಂಟೆಗಳ ಕಾಲ ಸಾಗಿತ್ತು. ರಾತ್ರಿಯ ಹೊತ್ತಿಗೆ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕಟ್ಟಡದ ಒಳಗೆ ಸಿಲುಕಿದ್ದ ಜನರನ್ನು ಕಿಟಕಿಗಳನ್ನು ಒಡೆದು ರಕ್ಷಿಸುವ ಕಾರ್ಯವನ್ನು ಮಾಡಲಾಗಿದೆ. ಇದುವರೆಗೆ ಕನಿಷ್ಟ 60 ಮಂದಿಯನ್ನು ರಕ್ಷಿಸಲಾಗಿದೆ ಎಂದು ಹೊರ ಜಿಲ್ಲೆ ಡಿಸಿಪಿ ಸಮೀರ್ ಶರ್ಮಾ ತಿಳಿಸಿದ್ದಾರೆ.

ಘಟನೆಯಲ್ಲಿ ಒಟ್ಟು ೨೭ ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಯೂ ಒಳಗೊಂಡಿದ್ದಾರೆ. ಅಲ್ಲದೇ ಇನ್ನೂ ಕೆಲವರು ಕಟ್ಟಡದ ಒಳಗೆ ಸಿಲುಕಿ ಕೊಂಡಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಇನ್ನು ಹಲವು ಮೃತ ದೇಹಗಳ ಗುರುತು ಪತ್ತೆಯಾಗಿಲ್ಲ. ಘಟನೆಯ ಬೆನ್ನಲ್ಲೇ ಕಂಪನಿಯ ಮಾಲೀಕರಾದ ಹರೀಶ್ ಗೋಯೆಲ್ ಮತ್ತು ವರುಣ್ ಗೋಯೆಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಅನುಮತಿ ಪಡೆಯದ ಕಟ್ಟಡದ ಮಾಲೀಕ ಮನೀಶ್ ಲಾಕ್ರಾ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ 2 ದಿನ ವಿದ್ಯುತ್‌ ಕಡಿತ : ಯಾವ ಭಾಗದಲ್ಲಿ ಯಾವ ದಿನ, ಇಲ್ಲಿದೆ ಮಾಹಿತಿ

ಇದನ್ನೂ ಓದಿ : Golden Chariot secret : ಸಮುದ್ರ ತೀರದಲ್ಲಿ ತೇಲಿ ಬಂತು ಚಿನ್ನದ ರಥ : ಕೊನೆಗೂ ಬಯಲಾಯ್ತು ಹಿಂದಿನ ಸತ್ಯ

Delhi Mundka Fire tragedy 2 Firefighters and 27 Dead Building Owner Absconding

Comments are closed.