ನವದೆಹಲಿ : ಕೊರೊನಾ ವೈರಸ್ ಸೋಂಕು ಇಳಿಕೆಯಾದ ಹಿನ್ನೆಲೆ ಯಲ್ಲಿ ಲಾಕ್ ಡೌನ್ ತೆರವು ಮಾಡಲು ದೆಹಲಿ ಸರಕಾರ ಮುಂದಾಗಿದೆ. ಜೂನ್ 7ರಿಂದ ಹಂತ ಹಂತವಾಗಿ ಲಾಕ್ ಡೌನ್ ತೆರವು ಮಾಡಲಾಗು ವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಮುಖ್ಯವಾಗಿ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಸಂಚಾರ ಮಾಡಲಿದೆ. ಆದರೆ ಲಾಕ್ ಡೌನ್ ಜಾರಿಯಲ್ಲಿ ಇರಲಿದ್ದು, ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಅಷ್ಟೇ ಅಲ್ಲಾ ಅಂಗಡಿಗಳನ್ನು ತೆರೆಯಲು ಸಮ ಬೆಸ ಮಾನದಂಡ ಗಳನ್ನು ಅನುಸರಿಸಲಾಗುತ್ತದೆಮ ಅಲ್ಲದೇ ಖಾಸಗಿ ಕಚೇರಿಗಳಲ್ಲಿ ಶೇ.50 ಹಾಜರಾತಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸ ಲಾಗಿದೆ ಎಂದು ಹೇಳಿದ್ದಾರೆ.