Diwali Firecrackers Ban : ದೀಪಾವಳಿ ಪಟಾಕಿ ನಿಷೇಧ : ಪಟಾಕಿ ಸಿಡಿಸಿದರೆ 6 ತಿಂಗಳು ಜೈಲು

ನವದೆಹಲಿ : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಎರಡು ವರ್ಷಗಳ ಕಾಲ ಕಳೆಗುಂದಿದ್ದ ದೀಪಾವಳಿಯನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜನತೆ ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಪಟಾಕಿ ಖರೀದಿ, ಮಾರಾಟಕ್ಕೆ ಸಿದ್ದತೆಯೂ ಜೋರಾಗಿ ನಡೆಯುತ್ತಿದೆ. ಈ ನಡುವಲ್ಲೇ ದೆಹಲಿ ಸರಕಾರ ಪಟಾಕಿ ಸಿಡಿಸುವುದಕ್ಕೆ ನಿಷೇಧ (Diwali Firecrackers Ban ) ಹೇರಿದೆ. ಒಂದೊಮ್ಮೆ ಪಟಾಕಿ ಸಿಡಿಸಿದ್ರೆ ಆರು ತಿಂಗಳ ಕಾಲ ಜೈಲು ಶಿಕ್ಷೆ ಹಾಗೂ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಪರಿಸರ ಸಚಿವ ಗೋಪಾಲ್ ರೈ ಅವರು, ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ. ಸೆಪ್ಟೆಂಬರ್‌ನಲ್ಲಿ, ನಗರಾಡಳಿತವು ದೀಪಾವಳಿ ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿದೆ. ಕಳೆದ ಎರಡು ವರ್ಷಗಳಿಂದಲೂ ಇದೇ ಪದ್ದತಿಯನ್ನೇ ಅನುಸರಿಸಲಾಗುತ್ತಿದೆ ಎಂದಿದ್ದಾರೆ.

ಸಾರ್ವಜನಿಕ ಜಾಗೃತಿ ಅಭಿಯಾನ ದಿಯೇ ಜಲವೋ ಪತಾಖೆ ನಹಿ (ಬೆಳಕಿನ ದಿಯಾಗಳು, ಪಟಾಕಿ ಅಲ್ಲ ) ಅಕ್ಟೋಬರ್ 21ರಿಂದ ಆರಂಭಿಸಲಾಗುತ್ತಿದೆ. ದೆಹಲಿ ಸರಕಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಸೆಂಟ್ರಲ್ ಪಾರ್ಕ್‌ನಲ್ಲಿ 51,000 ದೀಪಗಳನ್ನು ಬೆಳಗಿಸಲಿದೆ. ದೆಹಲಿಯಲ್ಲಿ ಪಟಾಕಿಗಳನ್ನು ಖರೀದಿಸುವುದು ಮತ್ತು ಸಿಡಿಸಿದ್ರೆ 200 ರೂಪಾಯಿ ದಂಡ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಲು 408 ತಂಡಗಳನ್ನು ರಚಿಸಲಾಗಿದೆ ಎಂದು ರೈ ಹೇಳಿದ್ದಾರೆ. ದೆಹಲಿ ಪೊಲೀಸರು ಸಹಾಯಕ ಪೊಲೀಸ್ ಆಯುಕ್ತರ ಅಡಿಯಲ್ಲಿ 210 ತಂಡಗಳನ್ನು ರಚಿಸಿದ್ದು, ಕಂದಾಯ ಇಲಾಖೆ 165 ತಂಡಗಳನ್ನು ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ 33 ಅನ್ನು ರಚಿಸಿದೆ. ಅಕ್ಟೋಬರ್ 16 ರವರೆಗೆ 188 ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2,917 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ದೆಹಲಿಯಲ್ಲಿ ದಿನೇ ದಿನೇ ಗಾಳಿಯ ಗುಣಮಟ್ಟವು ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸರಕಾರ ಪರಿಸರ ಮಾಲಿನ್ಯವನ್ನು ತಡೆಗಟ್ಟು ನಿಟ್ಟಿನಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಡಿಸೇಲ್ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದು, ಸಮ ಬೆಸ ರೂಲ್ಸ್ ಕೂಡ ಜಾರಿಗೊಳಿಸಿತ್ತು. ಅದ್ರಲ್ಲೂ ದೀಪಾವಳಿಯ ವೇಳೆಯಲ್ಲಿ ಬಾರೀ ಪ್ರಮಾಣದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ಹೊರ ಸೂಸುವ ಕಾಕ್ಟೈಲ್ ಮತ್ತು ನೆರೆಯ ರಾಜ್ಯದಲ್ಲಿ ಮಾಲಿನ್ಯವೂ ಕೂಡ ದೆಹಲಿಯ ವಾತಾವರಣವನ್ನು ಹಾಳು ಮಾಡುತ್ತಿದೆ. ಪ್ರತಿ ವರ್ಷ ದೀಪಾವಳಿಯ ಹೊತ್ತಿಗೆ ಮಾಲಿನ್ಯದ ಮಟ್ಟವು ಹೆಚ್ಚಾಗುತ್ತದೆ.

ಇನ್ನು ಪಟಾಕಿ ಸಿಡಿಸುವುದರಿಂದ ಮಕ್ಕಳು, ಮಹಿಳೆಯರು, ವೃದ್ದರ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನುಂಟು ಮಾಡುತ್ತಿದೆ. ದೆಹಲಿ ಸರಕಾರು ಈ ವರ್ಷ ಎಲ್ಲಾ ರೀತಿಯ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ಸಂಪೂರ್ಣವಾಗಿ ನಿಷೇಧವನ್ನು ಹೇರಿದೆ. ಆನ್ಲೈನ್ ನಲ್ಲಿ ಪಠಾಕಿ ಮಾರಾಟಕ್ಕೂ ಬ್ರೇಕ್ ಹಾಕಿದೆ.

ಇದನ್ನೂ ಓದಿ : Diwali 2022 Guildlines : ದೀಪಾವಳಿಗೆ ಮಾಲಿನ್ಯ ಮಂಡಳಿ ಹೊಸ ರೂಲ್ಸ್ : ರಾತ್ರಿ 8 ರಿಂದ 10ರ ವರೆಗೆ ಹಸಿರು ಪಟಾಕಿಗೆ ಅವಕಾಶ

ಇದನ್ನೂ ಓದಿ : Congress President Election Result:ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ : ನಿಜವಾಯ್ತು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ

Diwali Firecrackers Ban Bursting Crackers 6 month jail in Delhi

Comments are closed.