ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರ ಅನುಕೂಲಕ್ಕಾಗಿ ರಾಜ್ಯ ಸರಕಾರ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೂಡಲೇ ವಿಶೇಷ ಅಧಿವೇಶನವನ್ನು ಕರೆದು, ಬಜೆಟ್ ಮರುಪರಿಶೀಲನೆ ನಡೆಸುವಂತೆ ಅವರು ಸಲಹೆ ನೀಡಿದ್ದಾರೆ.

ಬೆಂಗಳೂರಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ರೈತರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಉದ್ಯೋಗಿಗಳು, ಕಾರ್ಮಿಕರು, ನೇಕಾರರು ಸೇರಿದಂತೆ ಎಲ್ಲಾ ವರ್ಗದ ಜನರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲಾ ವರ್ಗದ ಜನರಿಗೆ ಸಹಕಾರವನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ಹಿಂದೆ ಮಂಡಿಸಿದ್ದ ಬಜೆಟ್ ನಲ್ಲಿ ಮರು ಪರಿಶೀಲನೆಯನ್ನು ನಡೆಸಿ, ಎಲ್ಲಾ ವರ್ಗದವರಿಗೂ ಅನುಕೂಲವಾಗುವಂತ ಯೋಜನೆಗಳನ್ನು ಜಾರಿಗೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ.
ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಸರಕಾಕ್ಕೆ ಬೆಂಬಲವನ್ನು ನೀಡುವುದಾಗಿ ಅವರು ಘೋಷಿಸಿದ್ದಾರೆ.