ನೋಯ್ಡಾ: ಡಬ್ಬಲ್ ಡೆಕ್ಕರ್ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿ (Bus Accident 8 Killed), ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿರುವ ಮೂವರು ಗಾಯಾಳುಗಳನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ದಾಖಲು ಮಾಡಲಾಗಿದೆ.
ಸೋಮವಾರ ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಬಸ್ ಗಳು ಲೋನಿಕ್ತ್ರಾ ಪೊಲೀಸ್ ಠಾಣಾ ಜಾಗದ ನರೇಂದ್ರಪುರ ಮದ್ರಹಾ ಗ್ರಾಮದ ಬಳಿಯಲ್ಲಿ ಬರುತ್ತಿದ್ದಂತೆಯೇ ಡಬಲ್ ಡೆಕ್ಕರ್ ಬಸ್ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮತ್ತೊಂದು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಿಎಚ್‌ಸಿ ಹೈದರ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಎರಡೂ ಬಸ್ಸುಗಳು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ.
ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ಮಾತನಾಡಿ, ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಹಿಂದಿನಿಂದ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಉಲ್ಲೇಖಿಸಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಷಾದ ವ್ಯಕ್ತ ಪಡಿಸಿದ್ದಾರೆ. ಗಾಯಾಳುಗಳು ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ರಸ್ತೆ ಅಪಘಾತದಲ್ಲಿ ಜೀವಹಾನಿ ಅತ್ಯಂತ ದುಃಖಕರವಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಭಗವಾನ್ ಶ್ರೀರಾಮನು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಎಂದಿದ್ದಾರೆ.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗುತ್ತದೆ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ಸಿಎಚ್‌ಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸತ್ತವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಬಾರಾಬಂಕಿ ಎಸ್‌ಪಿ ಅನುರಾಗ್ ವತ್ಸ್ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಇದನ್ನೂ ಓದಿ : BPL card holders : ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ಚಕ್ರದ ವಾಹನ ಹೊಂದಿದ್ರೆ ಭಾರೀ ದಂಡ
Double-Decker Bus Accident 8 Killed, Several Injured in Uttar Pradesh Purvanchal Expressway