- Advertisement -
ಅಸ್ಸಾಂ : ಗುವಾಹಟಿ ಸೇರಿದಂತೆ ಅಸ್ಸಾಂನ ಈಶಾನ್ಯ ಭಾಗಗಳಲ್ಲಿ ಪ್ರಬಲ ಭೂಕಂಪನಸಂಭವಿಸಿದೆ. ಬೆಳಗ್ಗೆ 7 ಗಂಟೆ 55 ನಿಮಿಷಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪನದಲ್ಲಿ 6.4ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ.

ಭೂಮಿ ಕಂಪಿಸುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ನಗರದಲ್ಲಿನ ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿ ಕೊಂಡಿದೆ.
ಅಸ್ಸಾಂನ ಸೋನಿತ್ಪುರ ಭೂಕಂಪನದ ಕೇಂದ್ರ ಬಿಂದು ಎಂದು ಗುರುತಿ ಸಲಾಗಿದೆ. ಘಟನೆಯ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗ ಬೇಕಾಗಿದೆ.
