ಸೋಮವಾರ, ಏಪ್ರಿಲ್ 28, 2025
HomeNationalfire breaks out at hospital : ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಎಂಟು ಮಂದಿ ಸಜೀವ...

fire breaks out at hospital : ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಎಂಟು ಮಂದಿ ಸಜೀವ ದಹನ

- Advertisement -

ಮಧ್ಯ ಪ್ರದೇಶ : fire breaks out at hospital : ಮಧ್ಯ ಪ್ರದೇಶದ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಜಬಲ್​​ಪುರದ ಗೋಹಲ್​​ಪುರ ಪೊಲೀಸ್​ ಠಾಣೆ ವ್ಯಾಪ್ತಿಯ ದಾಮೋಹ್​​ ನಾಕಾ ಬಳಿಯ ನ್ಯೂ ಲೈಫ್​ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. ಪೊಲೀಸರ ಪ್ರಕಾರ ರೋಗಿಗಳನ್ನು ಆಸ್ಪತ್ರೆಗಳಿಂದ ಶಿಫ್ಟ್​ ಮಾಡುವ ಕೆಲಸ ಮಾಡಲಾಗುತ್ತಿದೆ.


ಜಬಲ್ಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸ್ಥಳೀಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಈ ವಿಚಾರದ ಬಗ್ಗೆ ನಿಗಾ ಇಡುವಂತೆ ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ರಕ್ಷಣಾ ಕಾರ್ಯವನ್ನು ಕೈಗೊಳ್ಳಲು ನಿರಂತರ ಪ್ರಯತ್ನ ಮಾಡಲಾಗುತ್ತಿದೆ. .ಪರಿಹಾರ ಹಾಗೂ ರಕ್ಷಣಾ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ಮಧ್ಯ ಪ್ರದೇಶದ ಸಿಎಂ ಶಿವರಾಜ ಸಿಂಗ್​ ಚೌಹಾಣ್​ ಟ್ವೀಟ್​ ಮಾಡಿದ್ದಾರೆ.

ಮೃತರಿಗೆ ಸಂತಾಪ ಸೂಚಿಸಿದ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರವು ತಲಾ ಐದು ಲಕ್ಷ ರೂಪಾಯಿಗಳನ್ನು ಘೋಷಣೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ನೆರವು ನೀಡಲಿದ್ದು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.


ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯ ಮೂಲಕ ಅಂದಾಜಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಸಿದ್ಧಾರ್ಥ್​ ಬಹುಗುಣ ಹೇಳಿದರು .

ಇದನ್ನು ಓದಿ : modi will be bjps pm candidate : 2024ರಲ್ಲಿಯೂ ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿಯೆಂದ ಅಮಿತ್​ ಶಾ

ಇದನ್ನೂ ಓದಿ : BIG BREAKING : ನಂದಮೂರಿ ಕುಟುಂಬದಲ್ಲಿ ದುರಂತ : ಎನ್ ಟಿಆರ್ ಪುತ್ರಿ ಉಮಾಮಹೇಶ್ವರಿ ಆತ್ಮಹತ್ಯೆ

Eight killed nine injured as massive fire breaks out at hospital in Madhya Pradesh’s Jabalpur

RELATED ARTICLES

Most Popular