Eknath Shinde : ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಕೆಡವಿ ಸಿಎಂ ಗದ್ದುಗೆಯಲ್ಲಿ ಕುಳಿತಿರುವ ಏಕನಾಥ್ ಶಿಂಧೆ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ 144 ಶಾಸಕರ ಬಹುಮತವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆ ಎಣಿಕೆ ಕಾರ್ಯ ಇನ್ನೂ ನಡೆಯುತ್ತಲೇ ಇದೆ .
31 ತಿಂಗಳುಗಳ ಕಾಲ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಿದ್ದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸರ್ಕಾರವನ್ನು ಕೆಡವುವಲ್ಲಿ ಮಹತ್ವದ ಪಾತ್ರ ವಹಿಸಿದ್ದವರೇ ಏಕನಾಥ್ ಶಿಂಧೆ. 50ರಷ್ಟು ಶಿವಸೇನೆ ನಾಯಕರ ಜೊತೆಯಲ್ಲಿ ಹಿಂದಿನ ಸರ್ಕಾರದ ವಿರುದ್ಧ ಬಂಡಾಯವೆದ್ದು ಆಸ್ಸಾಂನ ಗುವಾಹಟಿಯಲ್ಲಿರುವ ರೆಸಾರ್ಟ್ನಲ್ಲಿ ತಂಗಿದ್ದರು. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಪ್ ಜಾರಿಗೊಳಿಸಿದ್ದರೂ ಸಹ ಕದಲದ ಈ ಟೀಂ ಪರೋಕ್ಷವಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲಾ ರೀತಿಯಲ್ಲಿ ಪ್ಲಾನ್ ಮಾಡಿತ್ತು. ಕೊನೆಗೂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಮಹಾರಾಷ್ಟ್ರಕ್ಕೆ ಮರಳಿದ ಬಂಡಾಯ ಶಾಸಕರ ಟೀಂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವ ಕಾರ್ಯವನ್ನು ಚುರುಕುಗೊಳಿಸಿತ್ತು .
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ರೆಬೆಲ್ ಶಾಸಕರ ಟೀಂ ಜೂನ್ 30ರಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಯನ್ನು ಭೇಟಿಯಾಗಿದ್ದರು. ರಾಜ್ಯಪಾಲರನ್ನು ಭೇಟಿಯಾಗಿ ರಾಜಭವನದಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದ ದೇವೇಂದ್ರ ಫಡ್ನವಿಸ್ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದರು. ಅಂದು ಪ್ರಮಾಣ ವಚನ ಸ್ವೀಕರಿಸಿದ್ದ ಏಕನಾಥ್ ಶಿಂಧೆ ಸೋಮವಾರದಂದು ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚನೆ ನೀಡಿದ್ದರು. ಜುಲೈ 3 ಹಾಗೂ ನಾಲ್ಕರಂದು ಮಹಾರಾಷ್ಟ್ರದಲ್ಲಿ ವಿಶೇಷ ಅಧಿವೇಶನ ನಡೆದಿದ್ದು ಮಹಾರಾಷ್ಟ್ರದಲ್ಲಿ ಭದ್ರವಾಗಿ ನೆಲೆಯೂರುವಲ್ಲಿ ಏಕನಾಥ್ ಶಿಂಧೆ ಯಶಸ್ವಿಯಾಗಿದ್ದಾರೆ.
ಭಾನುವಾರದಂದು ಬಿಜೆಪಿ ಪರ ವಕೀಲ ರಾಹುಲ್ ನಾರ್ವೇಕರ್ ಸದನದ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಲಿಟ್ಮಸ್ ಪರೀಕ್ಷೆಯನ್ನು ಎದುರಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನು ಓದಿ : ನಿನ್ನೆ ದೋಸ್ತಿ.. ಇವತ್ತು ದುಷ್ಮನ್.. ಇಂಗ್ಲೆಂಡ್ ಆಟಗಾರನಿಗೆ ಚಳಿ ಬಿಡಿಸಿದ ಕಿಂಗ್ ಕೊಹ್ಲಿ!
ಇದನ್ನೂ ಓದಿ : India Vs England test : ಟೀಮ್ ಇಂಡಿಯಾಗೆ ದಿನೇಶ್ ಕಾರ್ತಿಕ್ ನಾಯಕ !
Eknath Shinde-led govt reaches majority mark of 144 in Maharashtra Assembly