ದಾವಣಗೆರೆ : ಮಾಜಿ ಸಚಿವ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆಯ ಅನುಗೋಡು ಗ್ರಾಮದ ಬಳಿಯಲ್ಲಿ ನಡೆದಿದೆ.
ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯಿಂದಾಗಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಬಳಿಕ ಯು.ಟಿ. ಖಾದರ್ ಮತ್ತೊಂದು ವಾಹನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಪಘಾತ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.