ಲಕ್ನೋ : ಉತ್ತರ ಪ್ರದೇಶದ ಬಂಡಾದಲ್ಲಿ ತಂದೆಯೊಬ್ಬ, ಮಗಳ ಹತ್ಯೆ ಮಾಡಿದ್ದಾನೆ. ಘಟನೆ ಸಿಮೌನಿ ಚೌಕಿಯಲ್ಲಿ ನಡೆದಿದೆ. 22 ವರ್ಷದ ಹುಡುಗಿಯನ್ನು ತಂದೆ, ಕೋಲಿನಲ್ಲಿ ಹೊಡೆದು ಹತ್ಯೆ ಮಾಡಿದ್ದಾನೆ. ರಸ್ತೆಯಲ್ಲಿ ಬಿದ್ದಿದ್ದ ಯುವತಿಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮೂಲಗಳು ಹೇಳಿವೆ. ಪ್ರೇಮ ಪ್ರಸಂಗ ಈ ಘಟನೆಗೆ ಕಾರಣ ಎನ್ನಲಾಗ್ತಿದೆ. ಯುವತಿ ತಂದೆ ಜೊತೆ ವಾಸವಾಗಿದ್ದಳು ಎನ್ನಲಾಗಿದೆ. ತಾಯಿ ಆಕೆ ಜೊತೆ ಇರಲಿಲ್ಲ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದೆ, ಹುಡುಗಿ ಮನೆ ಬಿಟ್ಟು ಓಡಿ ಹೋಗಿದ್ದಳು. ಆಗ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಂತ್ರ, ಯುವತಿಯನ್ನು ಪೊಲೀಸರು ತಂದೆಗೊಪ್ಪಿಸಿದ್ದರು. ಮದುವೆಗೆ ಹುಡುಗಿ ಒಪ್ಪುತ್ತಿರಲಿಲ್ಲ ಎನ್ನಲಾಗಿದೆ. ಹುಡುಗಿ ಪ್ರೀತಿಯಲ್ಲಿ ಬಿದ್ದಿದ್ದಾಳೆಂಬ ಕಾರಣ ಕೊಲೆಗೆ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: Crime News : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ : 42 ವರ್ಷದ ಕಾಮುಕ ಅರೆಸ್ಟ್
ಯುವತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ತಂದೆ ಮನಸ್ಸಿಗೆ ಬಂದಂತೆ ಥಳಿಸಿದ್ದಾನೆ. ನಂತ್ರ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದಾನೆ ಎನ್ನಲಾಗಿದೆ.
(A father who killed his daughter with a stick)