Fire accident in Narela : ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ :ಇಬ್ಬರು ಸಾವು

ನವದೆಹಲಿ : (Fire accident in Narela )ಪಾದರಕ್ಷೆ ತಯಾರಿಕಾ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿ, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್‌ ಏರಿಯಾದಲ್ಲಿನ ನಡೆದಿದೆ. ಪಾದರಕ್ಷೆ ಕಾರ್ಖಾನೆ(Fire accident in Narela )ಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹಲವರು ಕಾರ್ಖಾನೆಯ ಒಳಗೆ ಸಿಲುಕಿರುವ ಭೀತಿ ಎದುರಾಗಿದೆ.

ಮಂಗಳವಾರ ಬೆಳಗ್ಗೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆ(Fire accident in Narela )ಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಕಟ್ಟಡದ ಒಳಗೆ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ : Jamshed J Irani : ಭಾರತದ ಉಕ್ಕಿನ ಮನುಷ್ಯ ಜಮ್ಶೆಡ್ ಜೆ ಇರಾನಿ ವಿಧಿವಶ

ಇದನ್ನೂ ಓದಿ : Student Gang Raped : ಹೋಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಅರೆಸ್ಟ್‌, ಮೂವರು ಎಸ್ಕೇಪ್

ಪಾದರಕ್ಷೆ ತಯಾರಿಕಾ ಕಾರ್ಖಾನೆಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ಮೂರನೇ ಮಹಡಿಯ ವರೆಗೂ ವ್ಯಾಪಿಸಿತ್ತು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ. ಒಟ್ಟು 10 ಅಗ್ನಿಶಾಮಕ ದಳದ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೂ ಒಟ್ಟು ಮೂವರನ್ನು ರಕ್ಷಣೆ ಮಾಡಲಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : Maharashtra car Accident : ಪಂಡರಾಪುರಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಹರಿದ ಕಾರು : 7 ಸಾವು, ಹಲವರು ಗಂಭೀರ

ಇದನ್ನೂ ಓದಿ : EPF Interest Rate : EPF ಬಡ್ಡಿ ದರ ಇಂದು ಜಮಾ ಆಗುವ ಸಾಧ್ಯತೆ : ನಿಮ್ಮ ಮೊತ್ತವನ್ನು ಪರಿಶೀಲಿಸಿ

ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಂಕಿ ಇತರ ಪ್ರದೇಶಕ್ಕೆ ವ್ಯಾಪಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಾದರಕ್ಷೆ ತಯಾರಿಕಾ ವಸ್ತುಗಳು ಬೆಂಕಿಯ ಕೆನ್ನಾಲಗೆಗೆ ಸುಟ್ಟು ಕರಕಲಾಗಿವೆ. ಅಲ್ಲದೇ ಕಚ್ಚಾ ವಸ್ತುಗಳಿಂದಲೇ ಬೆಂಕಿ ಬಹುಬೇಗನೆ ವ್ಯಾಪಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆಯನ್ನು ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

(Fire accident in Narela) A fire accident occurred in a footwear manufacturing factory on Tuesday morning and two workers were killed in the incident which took place in Delhi’s Narela Industrial Area. A fire accident has occurred in a footwear factory and many people are feared to be trapped inside the factory.

Comments are closed.