Fire in Bangalore Flight: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ.. ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ

ನವದೆಹಲಿ : Fire in Bangalore Flight ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿಮಾನದ ಪೈಲೆಟ್ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಮಾನದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ವಿಡಿಯೋ ವೈರಲ್ ಆಗಿದೆ.

ಶುಕ್ರವಾರ ರಾತ್ರಿ 9.45 ರ ಸುಮಾರಿಗೆ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ 6E-2131 ವಿಮಾನ ಟೇಕಾಫ್ ಆಗಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪೈಲೆಟ್ ಟೇಕಾಫ್ ಆಗ್ತಿದ್ದ ವಿಮಾನವನ್ನ ಮತ್ತೆ ತಕ್ಷಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಅಲ್ದೆ ವಿಮಾನ ನಿಲ್ದಾಣದ ಸಿಬ್ಬಂದಿಗೆ ಬೆಂಕಿಯ ಕಾಣಿಸಿಕೊಂಡಿದ್ದರ ಕುರಿತು ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನ ನಂದಿಸಿದ್ದಾರೆ. ಘಟನೆ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳ ಹಾರಾಟವನ್ನೂ ಸಹ ರದ್ದು ಮಾಡಲಾಗಿತ್ತು ಅಂತಾ ಮೂಲಗಳು ತಿಳಿಸಿವೆ.

ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಒಟ್ಟು 184 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಅಂತಾ ಗೊತ್ತಾಗಿದೆ. ಇನ್ನು ವಿಮಾನ್ ಟೇಕಾಫ್ ಆಗುವಾಗ ಕೆಲ ಪ್ರಯಾಣಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಎಲ್ಲರೂ ಒಂದು ಕ್ಷಣ ಗಾಬರಿಕೊಂಡಿದ್ದಾರೆ. ವಿಮಾನದ ಎಂಜಿನ್ ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಯಾಣಿಕರು ಸೆರೆ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಾಥಮಿಕ ತನಿಖೆಯಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಅಂತಾ ಗೊತ್ತಾಗಿದೆ. ಇನ್ನು ರಾತ್ರಿ ಬೇರೆ ವಿಮಾನದ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನ ಬೆಂಗಳೂರಿಗೆ ಕಳುಹಿಸಲಾಗಿದೆ. ಅಲ್ದೆ, ಪ್ರಕರಣದ ಸಂಬಂಧ ತನಿಖೆ ನಡೆಸುವಂತೆ ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಆದೇಶಿಸಿದೆ.

ಇದನ್ನೂ ಓದಿ : IPL 2023 RCB TEAM : ಟೀಂ ಇಂಡಿಯಾದ 3 ಆಟಗಾರರಿಗೆ ಕೋಕ್ ಕೊಡಲಿದೆ ಆರ್ ಸಿಬಿ

ಇದನ್ನೂ ಓದಿ : Kantara Song: ಸಕ್ಸಸ್ ಬೆನ್ನಲ್ಲೇ ಕಾಂತಾರ ಸಿನಿಮಾಕ್ಕೆ ಸಂಕಷ್ಟ; ‘ವರಾಹ ರೂಪಂ’ ಹಾಡು ಪ್ರಸಾರಕ್ಕೆ ಕೇರಳ ಕೋರ್ಟ್ ತಡೆಯಾಜ್ಞೆ

Fire in Bangalore Flight from Delhi to Bangalore A big disaster was missed by the pilot’s sense of timing

Comments are closed.