ದೆಹಲಿ:COVID protocol : ಚೀನಾದಲ್ಲಿ ಕೋವಿಡ್ ಸೋಂಕು ಮತ್ತೊಮ್ಮೆ ಮರಣ ಮೃದಂಗವನ್ನು ಆರಂಭಿಸಿದೆ. ಹೀಗಾಗಿ ಎಲ್ಲಾ ದೇಶಗಳಲ್ಲಿಯೂ ಇದೀಗ ಮತ್ತೊಮ್ಮೆ ಕೊರೊನಾ ಭೀಕರತೆಯ ಭಯ ಶುರುವಾಗಿದೆ. ಚೀನಾದಲ್ಲಿ ಆಸ್ಪತ್ರೆ ಹಾಗೂ ಸ್ಮಶಾನದಲ್ಲಿ ಜಾಗವೇ ಇಲ್ಲದಷ್ಟರ ಮಟ್ಟಿಗೆ ಕೊರೊನಾ ಭೀಕರತೆ ಇದೆ. ಈ ಎಲ್ಲವನ್ನು ಗಮನಿಸಿದ ಬಳಿಕ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕಾಂಗ್ರೆಸ್ ಸಂಸದ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಗೆ ಪತ್ರ ಬರೆದಿದ್ದಾರೆ.
ರಾಜಸ್ಥಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ಮಾಸ್ಕ್ ಹಾಗೂ ಸ್ಯಾನಿಟೈಸರ್ಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಕೊರೊನಾ ಲಸಿಕೆಯನ್ನು ಸ್ವೀಕರಿಸಿದವರು ಮಾತ್ರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಬಹುದು ಎಂದು ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಒಂದು ವೇಳೆ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಲು ಸಾಧ್ಯವಾಗದೇ ಇದ್ದರೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಬಹುದು ಎಂದು ಮನ್ಸುಖ್ ಮಾಂಡವಿಯಾ ಪತ್ರದ ಮುಖೇನ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವರು ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ. ಗುಜರಾತ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಮನ್ಸುಖ್ ಮಾಂಡವಿಯಾ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ನಡೆಯೋದನ್ನು ಇಷ್ಟಪಡುತ್ತಿಲ್ಲ. ಆದರೆ ಜನರು ಅದನ್ನು ಇಷ್ಟಪಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ . ಸಾರ್ವಜನಿರ ಗಮನವನ್ನು ಬೇರೆಡೆ ಸೆಳೆಯಲು ಮನ್ಸುಖ್ ಮಾಂಡವಿಯಾ ಈ ಪ್ಲಾನ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ : Ranji Trophy Karnataka: ಪಾಂಡಿಚೇರಿ ವಿರುದ್ಧ ಮೊದಲ ದಿನವೇ ಕನ್ನಡಿಗರ ಭರ್ಜರಿ ಆಟ
ಇದನ್ನೂ ಓದಿ : Karnataka star to captain Sunrisers IPL: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕನ್ನಡಿಗ ನಾಯಕ ?
“Follow COVID protocol or postpone Bharat Jodo Yatra”: Health Minister writes to Rahul Gandhi, Ashok Gehlot