Fuel under GST: ರಾಜ್ಯಗಳು ಒಪ್ಪಿಗೆ ನೀಡಿದರೆ ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ ತರಲು ಸಿದ್ಧ :ಕೇಂದ್ರ ಸರ್ಕಾರ

ನವದೆಹಲಿ: FUEL under GST: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ದಿನೇದಿನೇ ಏರಿಕೆ ಆಗುವುದು, ವಾಹನ ಸವಾರರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೆ ತರಲು ಕೇಂದ್ರ ಸಿದ್ಧವಾಗಿರುವುದಾಗಿ ಹೇಳಿದೆ.

ಇದನ್ನೂ ಓದಿ: ಕಲ್ಲುಕ್ವಾರಿಯಲ್ಲಿ ಮಣ್ಣು ಕುಸಿತ : 15 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ಇದಕ್ಕೆ ರಾಜ್ಯ ಸರ್ಕಾರಗಳು ಸಮ್ಮತಿ ಸೂಚಿಸಬೇಕು. ಹಾಗೊಂದು ವೇಳೆ ರಾಜ್ಯಗಳು ಒಪ್ಪಿಗೆ ನೀಡಿದ್ದಲ್ಲಿ ಜಿಎಸ್‍ಟಿ ವ್ಯಾಪ್ತಿಗೆ ತರಲು ಸಿದ್ಧರಿದ್ದೇವೆ. ಆದರೆ ಇದನ್ನು ಹೇಗೆ ಜಾರಿಗೊಳಿಸಬೇಕು ಅನ್ನೋದೇ ಸದ್ಯದ ಪ್ರಶ್ನೆಯಾಗಿದೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರೇ ಉತ್ತರ ಕಂಡುಕೊಳ್ಳಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಜಿಎಸ್ ಟಿ ವ್ಯಾಪ್ತಿಗೆ ತಂದರೆ ರಾಜ್ಯಗಳು ಹೇಗೆ ಆದಾಯ ಗಳಿಸುತ್ತವೆ ಅನ್ನೋದನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತದೆ. ಯಾವ ರಾಜ್ಯಗಳು ಆದಾಯ ಪಡೆಯುತ್ತಿದ್ದವೋ ಆ ರಾಜ್ಯಗಳು ಲಾಭವನ್ನು ಕಳೆದುಕೊಳ್ಳಲು ಇಷ್ಟಪಡಲ್ಲ. ಮದ್ಯ ಹಾಗೂ ಇಂಧನಗಳಿಂದ ಹೆಚ್ಚಿನ ಲಾಭ ಸಿಗುತ್ತದೆ. ಹಾಗಾಗಿ ಜಿಎಸ್ ಟಿ ವ್ಯಾಪ್ತಿಗೆ ತರಲು ಎಲ್ಲಾ ರಾಜ್ಯಗಳು ಒಪ್ಪಿಗೆ ನೀಡುವುದು ಕಷ್ಟ. ಸದ್ಯದ ಮಟ್ಟಿಗೆ ಹಣದುಬ್ಬರ ಸೇರಿ ಹಲವಾರು ವಿಚಾರಗಳ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸಹಕಾರವೂ ಅತಿ ಮುಖ್ಯ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಇದನ್ನೂ ಓದಿ: Spain village for sale: ಯಾರಿಗುಂಟು ಯಾರಿಗಿಲ್ಲ ; 2 ಕೋಟಿ ಕೊಟ್ಟರೆ ಈ ಇಡೀ ಗ್ರಾಮವೇ ನಿಮ್ಮದು

ಇಂಧನವನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಚರ್ಚಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿತ್ತು. ಕಳೆದ ತಿಂಗಳು ಲಖನೌ ನಲ್ಲಿ ನಡೆದ ಸಭೆಯಲ್ಲಿ ಅದನ್ನು ಅನುಸರಿಸಲಾಗಿದೆ. ಆದರೆ ರಾಜ್ಯಗಳು ಒಪ್ಪಿಗೆ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.

Fuel under GST: Ready to bring petrol and diesel under GST if states agree says Central Govt

Comments are closed.