ಮಂಗಳವಾರ, ಏಪ್ರಿಲ್ 29, 2025
HomeNationalGas leakage in Bopal : ಭೋಪಾಲ್‌ ಕ್ಲೋರೀನ್‌ ಟ್ಯಾಂಕ್‌ನಿಂದ ಅನಿಲ ಸೋರಿಕೆ ; ಆರು...

Gas leakage in Bopal : ಭೋಪಾಲ್‌ ಕ್ಲೋರೀನ್‌ ಟ್ಯಾಂಕ್‌ನಿಂದ ಅನಿಲ ಸೋರಿಕೆ ; ಆರು ಮಂದಿಯ ಸ್ಥಿತಿ ಚಿಂತಾಜನಕ

- Advertisement -

ಭೋಪಾಲ್‌ : (Gas leakage in Bopal) ಕ್ಲೋರಿನ್ ಟ್ಯಾಂಕ್ ನಿಂದ ಅನಿಲ ಸೋರಿಕೆಯಾಗಿ ೧೫ ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನ ಈದ್ಗಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಈ ಪೈಕಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೀರನ್ನು ಸ್ವಚ್ಚಗೊಳಿಸಲು ಸ್ಥಾಪಿಸಲಾಗಿರುವ ಟ್ಯಾಂಕ್ ನಲ್ಲಿ ಈ ಘಟನೆ(Gas leakage in Bopal) ಸಂಭವಿಸಿದೆ.

ಮದರ್ ಇಂಡಿಯಾ ಕಾಲೋನಿಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಅಳವಡಿಸಲಾಗಿದ್ದ ಕ್ಲೋರಿನ್ ಟ್ಯಾಂಕ್ ನಿಂದ ಅನಿಲ(Gas leakage in Bopal) ಸೋರಿಕೆಯಾಗಿದೆ. ಅನಿಲ ಸೋರಿಕೆಯಾಗುತ್ತಿದ್ದಂತೆಯೇ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದ ಮಕ್ಕಳು ಸೇರಿದಂತೆ ಹಲವರಿಗೆ ಕಣ್ಣು ಉರಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದ್ರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಲ್ಲದೇ ಮುಂಜಾಗ್ರತಾ ಕ್ರಮವನ್ನು ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : Mangaluru Airport : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ ಟಿಸಿ ಬಸ್‌ ಸಂಚಾರ ಪುನರಾರಂಭ

ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಘಟನೆಯ ಕುರಿತು ತನಿಖೆ ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ. ನಂತರ ಸಚಿವರು ಹಮೀದಿಯಾ ಆಸ್ಪತ್ರೆಗೆ ಭೇಟಿ ನೀಡಿ ಅನಿಲ ಸೋರಿಕೆಯಿಂದ ಸಂತ್ರಸ್ತರಾಗಿರುವ ಜನರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಅನಿಲ ಸೋರಿಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Karnataka Ratna: ಮರೆಯಾದ ಮಾಣಿಕ್ಯಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರದಿಂದ ಈ ಸ್ಟಾರ್ ನಟರಿಗೆ ಆಹ್ವಾನ

ಅನಿಲ ಅವಘಡ ಸಂಭವಿಸುತ್ತಿದ್ದಂತೆಯೇ ಸ್ಥಾವರದ ಸುತ್ತಮುತ್ತಲಿನ ನಿವಾಸಿಗಳನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಅಲ್ಲದೇ ಮುಂದಿನ ಎರಡು ಮೂರು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಈದ್ಗಾ ಹಿಲ್ಸ್ ಮಾದರಿ ಮೈದಾನ, ಶಹಜಹಾನಾಬಾದ್ ಕೊಹೆಫಿಜಾ ಲಾಲ್ ಘಾಟಿ ಸೇರಿದಂತೆ 50ಕ್ಕೂ ಹೆಚ್ಚು ಕಾಲೋನಿಗಳಲ್ಲಿ ಇಂದು ನೀರು ಪೂರೈಕೆಯಾಗುತ್ತಿಲ್ಲ.

ಇದನ್ನೂ ಓದಿ : PM Kisan Samman Nidhi : ಪತಿ ಮತ್ತು ಪತ್ನಿ ಇಬ್ಬರೂ ವರ್ಷಕ್ಕೆ 6,000 ರೂ. ಕ್ಲೈಮ್ ಮಾಡಿಕೊಳ್ಳಬಹುದಾ; ಪಿಎಂ ಕಿಸಾನ್ ಯೋಜನೆಯ ನಿಯಮ ಹೇಳುವುದಾದರೂ ಏನು…

1984 ರ ವಿಶ್ವದ ಅತಿದೊಡ್ಡ ರಾಸಾಯನಿಕ ವಿಪತ್ತು ಎಂದು ಕರೆಯಲಾಗುತ್ತಿರುವ ಭೋಪಾಲ್ ಅನಿಲ ದುರಂತದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ವಿವಿಧ ಕಾಯಿಲೆಗೆ ತುತ್ತಾಗಿದ್ದರು. ಇದೀಗ ಅನಿಲ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ.

(Gas leakage in Bhopal) An incident in which 15 people fell ill due to gas leakage from a chlorine tank took place in Idga Hills area of Bhopal, Madhya Pradesh. The condition of six of them is critical and they have been admitted to the hospital. This incident (Gas leakage in Bopal) happened in a tank installed to purify water.

RELATED ARTICLES

Most Popular