PFI Ban : ಭಾರತದಲ್ಲಿ 5 ವರ್ಷ PFI ನಿಷೇಧ :ಕೇಂದ್ರ ಸರಕಾರದ ಅಧಿಸೂಚನೆ

ನವದೆಹಲಿ : (PFI Ban) ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI ) ಮತ್ತು ಅದರ ಸಹವರ್ತಿ ಹಾಗೂ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿದ್ದು, ಕೇಂದ್ರ ಸರಕಾರ ಮೂಲಗಳ ಮಾಹಿತಿಯನ್ನು ಆಧರಿಸಿ ಸುದ್ದಿಸಂಸ್ಥೆ ಎನ್‌ಐಎ ಟ್ವೀಟ್‌ ಮಾಡಿದೆ.

ದೇಶದಲ್ಲಿ ನಡೆದಿರುವ ಹಲವು ಹಿಂಸಾಚಾರ, ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 15 ರಾಜ್ಯಗಳಲ್ಲಿ ಪಿಎಫ್‌ಐನ 106 ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿತ್ತು. ಪಿಎಫ್‌ಐಗೆ ಸಂಬಂಧಿಸಿದ 19 ಪ್ರಕರಣಗಳನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಈ ದಾಳಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ವಿವಿಧ ಭದ್ರತಾ ಏಜೆನ್ಸಿಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಉದಯ್‌ಪುರ್‌, ಅಮರಾವತಿಯಲ್ಲಿ ಶಿರಚ್ಚೇಧ ಪ್ರಕರಣ ಅಪರಾಧಿಗಳ ಜೊತೆಗೆ ಪಿಎಫ್‌ಐ ನಂಟು ಹೊಂದಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಕೇಂದ್ರ ಸರಕಾರ ಪಿಎಫ್‌ಐ ವಿರುದ್ದ ಕಠಿಣ ನಿರ್ಧಾರವನ್ನು ಕೈಗೊಂಡಿದೆ.

ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ಐದು ವರ್ಷಗಳ ಅವಧಿಗೆ ನಿಷೇಧ ಹೇರ ಆದೇಶವನ್ನು ಹೊರಡಿಸಿದೆ. 2007 ರಲ್ಲಿ ರಚನೆಯಾದ ಪಿಎಫ್‌ಐ ಸಂಗಟನೆ ತನ್ನನ್ನು “ಅಲ್ಪಸಂಖ್ಯಾತರು, ದಲಿತರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುವ ಸಂಘಟನೆ” ಎಂದು ಹೇಳಿಕೊಂಡಿತ್ತು. ದಕ್ಷಿಣ ಭಾರತದಲ್ಲಿ ಮೂರು ಮುಸ್ಲಿಂ ಸಂಘಟನೆಗಳು, ಕೇರಳದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್, ಕರ್ನಾಟಕ ಫೋರಂ ಫಾರ್ ಡಿಗ್ನಿಟಿ ಮತ್ತು ತಮಿಳುನಾಡಿನ ಮನಿತಾ ನೀತಿ ಪಸರೈಗಳನ್ನು ವಿಲೀನಗೊಳಿಸಿ ಪಿಎಫ್‌ಐ ಸ್ಥಾಪನೆಯಾಗಿತ್ತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾದ 170 ಕ್ಕೂ ಹೆಚ್ಚು ಜನರನ್ನು ಮಂಗಳವಾರ ಏಳು ರಾಜ್ಯಗಳಾದ್ಯಂತ ದಾಳಿಯಲ್ಲಿ ಬಂಧಿಸಲಾಗಿತ್ತು. ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಾದ್ಯಂತ ದಾಳಿಯನ್ನು ನಡೆಸಲಾಗಿತ್ತು. ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 25 ಜನರನ್ನು ಬಂಧಿಸಿದ್ದರೆ, ಉತ್ತರ ಪ್ರದೇಶದಲ್ಲಿ 57 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲಿ 30, ಮಧ್ಯಪ್ರದೇಶದಲ್ಲಿ 21, ಗುಜರಾತ್‌ನಲ್ಲಿ 10 ಮತ್ತು ಮಹಾರಾಷ್ಟ್ರದ ಪುಣೆಯಲ್ಲಿ 6 ಬಂಧಿತರ ಸಂಖ್ಯೆ. ಅಲ್ಲದೆ, ಕರ್ನಾಟಕದಲ್ಲೂ ಹಲವರನ್ನು ಬಂಧಿಸಲಾಗಿತ್ತು.

ಇದನ್ನೂಓದಿ : Mangalore’s Malali Masjid:ಮಂಗಳೂರಿನ ಮಳಲಿ‌ ಮಸೀದಿ ವರ್ಸಸ್ ಹಿಂದೂ ದೇವಾಲಯ ವಿವಾದ,ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

Government of India Declared PFI Ban Next 5 years after NIA Raid

Comments are closed.