ಮಂಗಳವಾರ, ಜೂನ್ 17, 2025
HomeCrimeAccident 5 Death : ವ್ಯಾನ್‌ - ಟ್ಯಾಂಕರ್ ಭೀಕರ ಅಪಘಾತ : 5 ಮಂದಿ...

Accident 5 Death : ವ್ಯಾನ್‌ – ಟ್ಯಾಂಕರ್ ಭೀಕರ ಅಪಘಾತ : 5 ಮಂದಿ ಸಾವು, ಮೂವರ ಸ್ಥಿತಿ ಚಿಂತಾಜನಕ

- Advertisement -

ಅಹಮದಾಬಾದ್‌ : ವ್ಯಾನ್‌ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ(Accident 5 Death) , ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ವಲಾನಾ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದರೆ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ವಟಮಾನ್‌ನಿಂದ ಭಾವನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆನಂದ್ ಜಿಲ್ಲೆಯ ಖಂಭತ್‌ಗೆ ವ್ಯಾನ್‌ನಲ್ಲಿ ಎಂಟು ಜನರು ಪ್ರಯಾಣಿಸುತ್ತಿದ್ದರು. ವ್ಯಾನ್‌ ವಲನಾ ಗ್ರಾಮದ ಬಳಿಗೆ ಬರುತ್ತಿದ್ದಂತೆಯೇ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ. ಘಟನೆ ನಡೆಯುತ್ತಲೇ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೋರ್ವರು ಆಸ್ಪತ್ರೆಗೆ ದಾಖಲಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಪೈಕಿ ಮೂವರು ಮಹಿಳೆಯರಿದ್ದಾರೆ ಎಂದು ತಿಳಿದುಬಂದಿದೆ.

ಭೀಕರ ರಸ್ತೆ ಅಪಘಾತದಿಂದಾಗಿ ಶವಗಳು ವ್ಯಾನ್‌ನಲ್ಲಿ ಅಂಟಿಕೊಂಡಿದ್ದು, ಶವಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯ್ತು. ಇನ್ನು ವ್ಯಾನಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೋಥ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಾರುಗಳ ನಡುವೆ ಭೀಕರ ಅಪಘಾತ : 3 ಮಂದಿ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಇದನ್ನೂ ಓದಿ : ಸಿನಿಮಾದಲ್ಲಿ ನಟಿಸುವ ಆಮಿಷ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

(5 death, 3 injured in van-tanker Accident in Gujarat)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular