Gujarat Bridge Incident:ಗುಜರಾತ್ ಸೇತುವೆ ಕುಸಿತ ಪ್ರಕರಣ : ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು

ಗುಜರಾತ್ :(Gujarat Bridge Incident) ಮೋರ್ಬಿ ಸೇತುವೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಅಲ್ಲದೇ ದುರಂತದಲ್ಲಿ ಗಾಯಗೊಂಡಿರುವ ಹಲವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದೀಗ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರು ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದಾರೆ.

(Gujarat Bridge Incident)ಗುಜರಾತ್‌ನ ಮೊರ್ಬಿ ನಗರದಲ್ಲಿರುವ ತೂಗು ಸೇತುವೆ ಶತಮಾನಗಳಷ್ಟು ಹಳೆಯದ್ದು. ರಜಾದಿನವಾದ ನಿನ್ನೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಸೇತುವೆಯ ಮೇಲೆ ನಿಂತು ನಿಸರ್ಗ ಸೌಂದರ್ಯವನ್ನು ವೀಕ್ಷಣೆ ಮಾಡುತ್ತಿದ್ದರು. ಈ ವೇಳೆಯಲ್ಲಿ ಸೇತುವೆ ಕುಸಿದು ಮಕ್ಕಳು, ಮಹಿಳೆಯರು ಸೇರಿದಂತೆ ಇದುವರೆಗೆ ಒಟ್ಟು 132ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತದ ಐದು ತಂಡಗಳು ನಾಪತ್ತೆಯಾದವರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯವನ್ನು ಕೈಗೊಂಡಿದೆ.

ಇನ್ನು ರಾಜ್ ಕೋಟ್ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರು ಇಂಡಿಯಾ ಟುಡೆ ಜೊತೆಗೆ ಮಾತನಾಡುತ್ತಾ, “ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ದುರಂತದಲ್ಲಿ ಬದುಕುಳಿದಿರುವ ಎಲ್ಲರನ್ನೂ ರಕ್ಷಿಸಲಾಗಿದೆ. ಅಲ್ಲದೇ ನದಿಯಲ್ಲಿ ಮುಳುಗಿರುವ ಶವಗಳನ್ನು ಹೊರತೆಗೆಯುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲಾಗುತ್ತಿದೆ. ಈ ದುರಂತಕ್ಕೆ ಕಾರಣರಾದವರಿಗೆ ಶಿಕ್ಷೆಯನ್ನು ವಿಧಿಸಲಾಗುತ್ತದೆ.ಸತ್ತವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಸ್ಥಳೀಯರು ಮತ್ತು ಎನ್‌ಜಿಒಗಳ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ 60 ಕ್ಕೂ ಹೆಚ್ಚು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ, ಅದರಲ್ಲಿ ಹೆಚ್ಚು ಮಕ್ಕಳು, ಮಹಿಳೆಯರು ಮತ್ತು ವೃದ್ದರು ಸೇರಿದ್ದಾರೆ. ಎನ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾವು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದಿದ್ದಾರೆ.

ಘಟನೆಯ ಕುರಿತು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ರಾಜಧಾನಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತನಿಖಾ ತಂಡವನ್ನು ಆರಂಭಿಸಿದೆ. ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 304 (ಕೊಲೆಗೆ ಸಮಾನವಲ್ಲದ ಅಪರಾಧಿ ನರಹತ್ಯೆ), 308 (ಸಾವಿಗೆ ಕಾರಣವಾಗುವ ಉದ್ದೇಶಪೂರ್ವಕ ಕೃತ್ಯ) ಮತ್ತು 114 (ಅಪರಾಧ ನಡೆದಾಗ ಕುಮ್ಮಕ್ಕು ನೀಡುವವರು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:Google Play Store: ಪ್ಲೇ ಸ್ಟೋರ್‌ನಿಂದ 13 ಡೇಂಜರಸ್‌ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌

ಇದನ್ನೂ ಓದಿ:Dinesh Karthik : ಡಿಕೆ ಸಾಹೇಬನ ಘೋರ ವೈಫಲ್ಯ, ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್ ಗಳಿಸಿರುವ ಸ್ಕೋರ್ ನೋಡಿದ್ರೆ ಗಾಬರಿ ಬಿದ್ದು ಹೋಗ್ತೀರಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರಿಗೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ದುರಂತದಲ್ಲಿ ಇದುವರೆಗೆ ಒಟ್ಟು 132 ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ 6.30 ರ ಸುಮಾರಿಗೆ ಸೇತುವೆ ಕುಸಿದಿದೆ. ದೀಪಾವಳಿ ರಜೆ ಮತ್ತು ಭಾನುವಾರದ ಕಾರಣ ಪ್ರವಾಸಿಗರ ನೂಕುನುಗ್ಗಲು ಇತ್ತು. ಸೇತುವೆ, ಪ್ರಮುಖ ಪ್ರವಾಸಿಗರ ಆಕರ್ಷಣೆ ಆಗಿರುತ್ತದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಯಿತು ಮತ್ತು ಪ್ರಧಾನಿ ಮೋದಿ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ.

Gujarat bridge collapse case: 12 members of BJP MP’s family killed

Comments are closed.