ಸೋಮವಾರ, ಜೂನ್ 16, 2025
HomeCrimeGujarat Gang Rape : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಅಪ್ರಾಪ್ತರು ಸೇರಿ...

Gujarat Gang Rape : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಅಪ್ರಾಪ್ತರು ಸೇರಿ 9 ಮಂದಿಯ ಬಂಧನ

- Advertisement -

ಡ್ಯಾಂಗ್ : 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ (Gujarat Gang Rape) ಗುಜರಾತ್‌ನ ಡ್ಯಾಂಗ್‌ ಜಿಲ್ಲೆಯಲ್ಲಿ ನಡೆದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಂದಿ ಕಾಮುಕರನ್ನು ಬಂಧಿಸಿದ್ದಾರೆ.

ಸುಮಾರು ಎರಡು ತಿಂಗಳ ಹಿಂದೆ ನಡೆದಿತ್ತು. ಆದರೆ ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಸಂಬಂಧಿಯೋರ್ವರು ವಿಡಿಯೋವನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಹ್ವಾ ತಾಲೂಕಿನಲ್ಲಿ ಅಪ್ರಾಪ್ತ ಸ್ನೇಹಿತನೊಬ್ಬ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಪಕ್ಕದ ಹಳ್ಳಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯ ಮೇಲೆ ಮೊದಲು ಅತ್ಯಾಚಾರವೆಸಗಿದ್ದಾನೆ. ಅದೇ ದಾರಿಯಲ್ಲಿ ಕಾಯುತ್ತಿದ್ದ ಹುಡುಗನ ಇತರ ಎಂಟು ಸ್ನೇಹಿತರು, ನಂತರ ಆಕೆಯನ್ನು ಸಮೀಪದಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗುವ ವೇಳೆಯಲ್ಲಿ ಆರೋಪಿಯೊಬ್ಬ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ ಮತ್ತು ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎನ್ ಎಚ್ ಸವ್ಸೆತಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಒಟ್ಟು ಆರು ಮಂದಿ ಆರೋಪಿಗಳು ಸುಮಾರು 20 ವರ್ಷ ಆಸುಪಾಸಿನವರಾಗಿದ್ದು, ಉಳಿದ ಮೂವರು ಅಪ್ರಾಪ್ತರಾಗಿದ್ದಾರೆ. ಘಟನೆಯ ನಂತರದಲ್ಲಿ ವಿಚಾರವನ್ನು ಯಾರಿಗೆ ತಿಳಿಸದಂತೆ ಹುಡುಗಿಗೆ ಬೆದರಿಕೆಯೊಡ್ಡಿದ್ದಾರೆ. ಹೀಗಾಗಿಯೇ ಬಾಲಕಿ ಸುಮಾರು ಎರಡು ತಿಂಗಳ ಕಾಲ ಯಾರಿಗೂ ವಿಷಯವನ್ನು ತಿಳಿಸಿರಲಿಲ್ಲ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 23 ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಎಲ್ಲಾ ಆರೊಪಿಗಳನ್ನು ಡಿಸೆಂಬರ್ 24 ರಂದು ಬಂಧಿಸಿದ್ದಾರೆ. ಆದರೆ ಮೂವರು ಅಪ್ರಾಪ್ತರ ಪೋಷಕರು ತಮ್ಮ ಜಾಮೀನನ್ನು ಪಡೆದುಕೊಂಡಿ ದ್ದಾರೆ, ಆದರೆ ಆರು ಪುರುಷರನ್ನು ನ್ಯಾಯಾಲಯವು ಪೊಲೀಸ್ ರಿಮಾಂಡ್‌ಗೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ 376 (ಡಿ) (ಎ) (ಅಪ್ರಾಪ್ತ ವಯಸ್ಕರ ಮೇಲೆ ಸಾಮೂಹಿಕ ಅತ್ಯಾಚಾರ), 506 (2) (ಅಪರಾಧ ಬೆದರಿಕೆ), 120 (ಬಿ) (ಅಪರಾಧ ಪಿತೂರಿ) ಮತ್ತು 114 (ಪ್ರಚೋದಕ) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Uttarakhand :ಅಂಕಲ್​ ಎಂದು ಕರೆದಿದ್ದಕ್ಕೆ ರೋಷಾವೇಷ..!ವಿದ್ಯಾರ್ಥಿನಿಯ ತಲೆಗೆ ಜಜ್ಜಿ ಆಕ್ರೋಶ

ಇದನ್ನೂ ಓದಿ : Gangrape Instagram Friend: ಚಲಿಸುತ್ತಿದ್ದ ಕಾರಿನಲ್ಲಿ 18 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ ಇನ್‌ಸ್ಟಾಗ್ರಾಂ ಗೆಳೆಯ

( Gujarat Gang Rape : teenage girl Allegedly Gang Rape in Gujarat, 9 Arrested)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular