ಗುಜರಾತ್ : ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತ ದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಆನಂದ್ ಜಿಲ್ಲೆಯ ಇಂದ್ರನಾಜ್ ಗ್ರಾಮದಲ್ಲಿ ನಡೆದಿದೆ.
ಗುಜರಾತ್ ನ ಅಹಮದಾಬಾದ್ ಜಿಲ್ಲೆಯ ವಟಮಾನ್ ಗೆ ಸಂಪರ್ಕಿ ಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಕಾರು ವಟವಾನ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ.
ವಟವಾನ್ ಕಡೆಗೆ ಕಾರು ಚಲಾಯಿಸುತ್ತಿತ್ತು. ಈ ವೇಳೆಯಲ್ಲಿ ವೇಗವಾಗಿ ಬಂದ ಟ್ರಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಟ್ರಕ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆನ್ನಲಾಗುತ್ತಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಸಂತ್ರಸ್ತರ ಕುಟುಂಬಕ್ಕೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ. ಪರಿಹಾರದ ಮೊತ್ತವನ್ನು ಸಂಬಂಧಿಗಳಿಗೆ ಘೋಷಿಸಿದೆ. ಅಲ್ಲದೆಸ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ಚೀಟ್ ಮಾಡಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.