Hardik Patel : ಗುಜರಾತ್ ಕಾಂಗ್ರೆಸ್ನ ಮಾಜಿ ಕಾರ್ಯಾಧ್ಯಕ್ಷ ಹಾಗೂ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಬಳಿಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ ನಿರ್ಧಾರ ಕೈಗೊಂಡಿರುವುದು ಗುಜರಾತ್ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಈ ರಾಜಕೀಯ ಬೆಳವಣಿಗೆಯು ಮಹತ್ವದ್ದೆನಿಸಿದೆ.
ಹಾರ್ದಿಕ್ ಪಟೇಲ್ ಮೇ 18ರಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಬಿಜೆಪಿ ಸೇರ್ತಾರಾ ಅಥವಾ ಆಮ್ ಆದ್ಮಿ ಪಕ್ಷದತ್ತ ವಾಲುತ್ತಾರಾ ಎಂಬ ಚರ್ಚೆಯು ರಾಜಕೀಯ ವಲಯದಲ್ಲಿ ಜೋರಾಗಿತ್ತು. 28 ವರ್ಷದ ಯುವ ರಾಜಕಾರಣಿ ಕಾಂಗ್ರೆಸ್ ಚುನಾವಣೆಯನ್ನು ಗಂಭೀರವಾಗಿ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದರು.
ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ಸಿ. ಆರ್ ಪಾಟೀಲ್ ಸಮ್ಮುಖದಲ್ಲಿ ಜೂನ್ 2ರಂದು ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಯಗ್ನೇಶ್ ದೇವ್ ಅಧಿಕೃತ ಮಾಹಿತಿ ನೀಡಿದ್ದಾರೆ .
ಹಾರ್ದಿಕ್ ಪಟೇಲ್ 2015ರಲ್ಲಿ ಪಾಟೀದಾರ ಕೋಟಾ ಚಳವಳಿಯ ಮೂಲಕ ಬೆಳಕಿಗೆ ಬಂದಿದ್ದರು. ತಾವು ರಾಜಕೀಯ ಸೇರ್ಪಡೆಯಾಗುವುದಿಲ್ಲ ಎಂದು ಸಾರ್ವಜನಿಕವಾಗಿ ಭರವಸೆ ನೀಡಿದ್ದ ಹಾರ್ದಿಕ್ ಪಟೇಲ್ 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 2020ರ ಜುಲೈ ತಿಂಗಳಲ್ಲಿ ಹಾರ್ದಿಕ್ ಪಟೇಲ್ರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಪಟೇಲ್ 1995 ರಿಂದ ಅಧಿಕಾರದಿಂದ ಹೊರಗುಳಿದ ರಾಜ್ಯದ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ದೂರದೃಷ್ಟಿ ಇಲ್ಲ ಎಂದು ಆರೋಪಿಸಿದ್ದರು. ಪಕ್ಷದ ಉನ್ನತ ನಾಯಕರು ತಮ್ಮ ಮೊಬೈಲ್ ಫೋನ್‌ಗಳಿಂದ ವಿಚಲಿತರಾಗಿದ್ದಾರೆ . ಇವರೆಲ್ಲ ರಾಜಕೀಯ ಬೆಳವಣಿಗೆಗಳಿಂದ ಇತ್ತೀಚಿಗೆ ರಾಹುಲ್ ಗಾಂಧಿ ಚುನಾವಣೆ ಪ್ರಚಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಿಕನ್ ಸ್ಯಾಂಡ್ವಿಚ್ ವ್ಯವಸ್ಥೆ ವಿಚಾರದಲ್ಲಿಯೇ ಹೆಚ್ಚು ತಲೆಕೆಡಿಸಿಕೊಂಡಿದ್ದರು ಎಂದು ಕಿಡಿಕಾರಿದ್ದಾರೆ.
ಇದನ್ನು ಓದಿ : rape hubby’s friend :ಪತಿಯೊಂದಿಗೆ ಸಲುಗೆಯಿಂದಿದ್ದ ಮಹಿಳೆಯ ಮೇಲೆ ಗ್ಯಾಂಗ್ರೇಪ್ಗೆ ಸುಪಾರಿ ಕೊಟ್ಟ ಪತ್ನಿ
ಇದನ್ನೂ ಓದಿ : Hardik Pandya : ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಮುಂದಿನ ನಾಯಕ
Hardik Patel, former Gujarat Congress working president, to join BJP on June 2