ಸೋಮವಾರ, ಜೂನ್ 16, 2025
HomeNationalಕಿಯೋನಿಕ್ಸ್ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ : ರಾಜ್ಯ ಸರಕಾರದಿಂದ ಅಧಿಕೃತ ಆದೇಶ

ಕಿಯೋನಿಕ್ಸ್ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ : ರಾಜ್ಯ ಸರಕಾರದಿಂದ ಅಧಿಕೃತ ಆದೇಶ

- Advertisement -

ಮಂಗಳೂರು : ಬಿಜೆಪಿಯ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ್ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜೂನ್ 12 ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡು ಬಿಜೆಪಿ ಸೇರಿದ್ದ ಹರಿಕೃಷ್ಣ ಬಂಟ್ವಾಳ್ ಆವರಿಗೆ ಪಕ್ಷ ಉನ್ನತ ಹುದ್ದೆಯನ್ನೇ ನೀಡಿದೆ.

ಕಿಯೋನಿಕ್ಸ್ ಸಂಸ್ಥೆ ವಿದ್ಯುನ್ಮಾನ ಉದ್ಯಮಗಳನ್ನು ಉತ್ತೇಜಿಸುವುದು ಹಾಗೂ ಜನಸಾಮಾನ್ಯರಿಗೆ ಮಾಹಿತಿ ತಂತ್ರಜ್ಞಾನ ಶಿಕ್ಷಣವನ್ನು ಒದಗಿಸುವ ಕಾರ್ಯವನ್ನು ಮಾಡುತ್ತಿದೆ. ನಿಗಮವು ಕೇಂದ್ರ ಸರಕಾರ, ರಾಜ್ಯ ಸರಕಾರ, ಬಿಹಾರ, ಅರುಣಾಚಲ ಪ್ರದೇಶ ಸೇರಿದಂತೆ ಇತರ ರಾಜ್ಯಗಳ ವಿವಿಧ ಇಲಾಖೆಗಳಲ್ಲಿ ಮಾಹಿತಿ ತಂತ್ರಜ್ಞಾನ, ತಂತ್ರಾಂಶ, ಇ – ಆಡಳಿತ ಯೋಜನೆಯ ಅನುಷ್ಠಾನ ಸೇರಿದಂತೆ ಹಲವು ಸೇವೆಗಳನ್ನು ಒದಗಿಸುತ್ತಿದೆ.

ಅಷ್ಟೇ ಅಲ್ಲಾ ಕಂಪ್ಯೂಟರ್ ಹಾರ್ಡ್ ವೇರ್, ಸಾಫ್ಟ್ ವೇರ್, ವಿದ್ಯುನ್ಮಾನ, ಸೋಲಾರ್ ಉಪಕರಣಗಳನ್ನು ಸರಕಾರದ ವಿವಿಧ ಇಲಾಖೆಗಳಿಗೆ ಸರಬರಾಜು ಮಾಡುವ ಕಾರ್ಯವನ್ನು ಮಾಡುತ್ತಿದೆ. ಅಲ್ಲದೇ ಸರಕಾರಿ ಸಂಸ್ಥೆಗಳಿಗೆ ಇ ಟೆಂಡರ್ ವ್ಯವಸ್ಥೆಗಾಗಿ ಟೆಂಡರ್ ವಿಜಾರ್ಡ್ ವ್ಯವಸ್ಥೆಯನ್ನು ಒದಗಿಸಿಕೊಟ್ಟಿದೆ. ಇದೀಗ ಇಂತಹ ಸಂಸ್ಥೆಯ ಅಧ್ಯಕ್ಷ ಹುದ್ದೆ ಹರಿಕೃಷ್ಣ ಬಂಟ್ವಾಳ್ ಅವರಿಗೆ ಒದಗಿಬಂದಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular