ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಎಪ್ರೀಲ್ 11ರಿಂದ ಭಾರೀ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ‌.

ಎಪ್ರಿಲ್ 13 ಮತ್ತು 14 ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗ ಲಿದೆ. ಅದ್ರಲ್ಲೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಏಪ್ರಿಲ್ 13 ಹಾಗೂ 14 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Comments are closed.