ಮಂಗಳೂರು/ಉಡುಪಿ : ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು ಇನ್ನು ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದೊಂದು ವಾರದ ಹಿಂದೆಯೇ ರಾಜ್ಯಕ್ಕೆ ಮುಂಗಾರು ಆಗಮನವಾಗಿದ್ದರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿದಿರಲಿಲ್ಲ. ಆದ್ರಿಂದು ಮುಂಗಾರು ಚುರುಕುಗೊಳ್ಳುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ 64.5 ಮಿ.ಮೀ. ನಿಂದ 111.5 ಮಿ.ಮೀ.ನಷ್ಟು ಮಳೆ ಸುರಿಯಲಿದೆ.

ಅಲ್ಲದೇ ಜೂನ್ 13 ಮತ್ತು 14ರಂದು ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, 115 ಮಿ.ಮೀ. ನಿಂದ 205 ಮಿ.ಮೀ.ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ.