Heeraben Modi dies: ಪ್ರಧಾನಿ ಮೋದಿ ತಾಯಿ ನಿಧನ: ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಂತಾಪ

(Heeraben Modi dies) ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್‌ ಮೋದಿ ಅವರು ಶುಕ್ರವಾರ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾವನಾತ್ಮಕವಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದ ಹೀರಾಬೆನ್‌ ಮೋದಿ (Heeraben Modi dies) ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಶತಾಯುಷಿಯಾಗಿ ಬದುಕಿ ಈಶ್ವರನ ಪಾದಗಳಲ್ಲಿ ಲೀನರಾಗಿದ್ದಾರೆ, ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಸಂತಾಪವನ್ನು ಸೂಚಿಸಿದ್ದು, “ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್‌ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಗಿದೆ. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ” ಎಂದು ಟ್ವೀಟ್‌ ಮಾಡುವ ಮೂಲಕ ಹೀರಾಬೆನ್‌ ಮೋದಿ ಅವರ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.

ಹೀರಾಬೆನ್‌ (Heeraben Modi dies) ಅವರ ನಿಧನಕ್ಕೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ , ಮಾಜಿ ಪ್ರಧಾನಿ ಎಚ್‌. ಡಿ. ದೇವೆಗೌಡ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌, ನಿತಿನ್‌ ಗಡ್ಕರಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದು, ಗೃಹ ಸಚಿವ ಅಮಿತ್‌ ಶಾ ಕೂಡ ಸಂತಾಪವನ್ನು ಸೂಚಿಸಿದ್ದಾರೆ. “ಹೀರಾಬೆನ್‌ ಅವರು ನಡೆಸಿದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನೆನಪಿನಲ್ಲಿ ಉಳಿಯುತ್ತದೆ. ಇಡೀ ರಾಷ್ಟ್ರವು ಪ್ರಧಾನಿ ಮೋದಿ ಹಾಗೇ ಅವರ ಕುಟುಂಬದೊಂದಿಗೆ ನಿಂತಿದೆ. ಓಂ ಶಾಂತಿ ಎಂದು ಟ್ವೀಟ್ಟರ್‌ ನಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.

ಇದನ್ನೂ ಓದಿ : Heeraben Modi Death: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ

ಇದನ್ನೂ ಓದಿ : Rape case-accused suicide: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿ ಮುಂಬೈ ಜೈಲಿನಲ್ಲಿ ಆತ್ಮಹತ್ಯೆ

2022ರ ಜೂನ್ 18ರಂದು ಹೀರಾಬೆನ್ ಮೋದಿ ಅವರು 100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಿಸಿಕೊಂಡಿದ್ದರು. ಈ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯ ಪಾದ ತೊಳೆದು ಪೂಜೆ ಸಲ್ಲಿಸಿ, ಆಶೀರ್ವಾದವನ್ನು ಪಡೆದುಕೊಂಡಿದ್ದರು.

Prime Minister Narendra Modi’s mother Shatayushi Heeraben Modi passed away on Friday and many dignitaries including Chief Minister Basavaraj Bommai have expressed emotional condolence over her death.

Comments are closed.