Heeraben Modi Health : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಚೇತರಿಕೆ

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ (Heeraben Modi Health) ಆರೋಗ್ಯ ಹದಗೆಟ್ಟಿರುವುದರಿಂದ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ಡಿಸೆಂಬರ್‌ 28ರಂದು ದಾಖಲಾಗಿದ್ದರು. ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಾದ ಎರಡು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಉತ್ತಮ ಸ್ಥಿತಿಯಲ್ಲಿದ್ದಾರೆ. ಹಾಗಾಗಿ ಇನ್ನೂ ಒಂದು ಅಥವಾ ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಗುಜರಾತ್ ಸರಕಾರ ಇಂದು ತಿಳಿಸಿದೆ.

“ಹೀರಾಬೆನ್‌ ಮೋದಿ ಅವರ ಆರೋಗ್ಯ ಚೆನ್ನಾಗಿದೆ. ಅವರ ಆರೋಗ್ಯ ವೇಗವಾಗಿ ಸುಧಾರಿಸುತ್ತಿದೆ. ಅವರು ಒಂದು ಅಥವಾ ಎರಡು ದಿನದಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ನಿನ್ನೆ ರಾತ್ರಿಯಿಂದ ಆಹಾರ ಸೇವನೆ ಪ್ರಾರಂಭವಾಯಿತು,” ಎಂದು ಮುಖ್ಯಮಂತ್ರಿ ಕಚೇರಿಯವರು ತಿಳಿಸಿದ್ದಾರೆ. ನಿನ್ನೆ ಪ್ರಧಾನಿ ಮೋದಿ ಅವರು ಆಸ್ಪತ್ರೆಗೆ ಸಂಜೆ 4 ಗಂಟೆ ಸುಮಾರಿಗೆ ದೆಹಲಿಯ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಬಂದು ತಾಯಿ ಹೀರಾಬೆನ್‌ ಅವರ ಯೋಗಕ್ಷೇಮದ ಬಗ್ಗೆ ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ನಂತರ ಅವರು 5.30 ಕ್ಕೆ ಮೊದಲೇ ಆಸ್ಪತ್ರೆಯಿಂದ ಹೊರಟು ಹೋಗಿದ್ದಾರೆ.

ಇದನ್ನೂ ಓದಿ : Heeraben Modi Health Update‌ : ಆಸ್ಪತ್ರೆಗೆ ಭೇಟಿ ನೀಡಿ ಅಮ್ಮನ ಯೋಗಕ್ಷೇಮ ವಿಚಾರಿಸಿದ ಮೋದಿ: ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ರಾಹುಲ್ ಗಾಂಧಿ

ಇದನ್ನೂ ಓದಿ : Heeraben Modi :ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : Nirmala Sitharaman : ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಏಮ್ಸ್‌ ಆಸ್ಪತ್ರೆಗೆ ದಾಖಲು

ನಂತರ ಮೋದಿ ಕುಟುಂಬದ ಹುಟ್ಟೂರೂ ವಡ್ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶೀಘ್ರ ಗುಣಮುಖರಾಗಲೆಂದು ಉತ್ತರ ಗುಜರಾತ್ ನ ವಡ್ನಗರದಲ್ಲಿರುವ ಹಟಕೇಶ್ವರ ಶಿವಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇತ್ತೀಚೆಗಷ್ಟೇ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆಂದು ಪ್ರಧಾನಿಯವರು ತಮ್ಮ ತಾಯಿಯನ್ನು ಭೇಟಿ ಮಾಡಿದ್ದರು. ಜೂನ್‌ನಲ್ಲಿ ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರೊಂದಿಗೆ ಪ್ರಧಾನಿ ಹರಟೆ ಮತ್ತು ಚಹಾ ಸೇವಿಸುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ್ದವು. ಪ್ರಧಾನಿ ಮೋದಿ ಅವರು ತಮ್ಮ ತಾಯಿಯೊಂದಿಗಿನ ಬಾಂಧವ್ಯದ ಬಗ್ಗೆ ಆಗಾಗ್ಗೆ ಮಾತನಾಡುತ್ತಾರೆ ಮತ್ತು ಅದರ ಬಗ್ಗೆ ತಮ್ಮ ವೆಬ್‌ಸೈಟ್‌ನಲ್ಲಿಯೂ ಬರೆದಿದ್ದಾರೆ.‌

Heeraben Modi Health : Prime Minister Narendra Modi’s mother Heeraben Modi is recovering in health

Comments are closed.