ಗಾಂಧಿನಗರ : (Heritage Over bridge collapses ) ಮೇಲ್ಸೇತುವೆ ಕುಸಿದು 500ಕ್ಕೂ ಹೆಚ್ಚು ಮಂದಿ ನದಿಗೆ ಉರುಳಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಯಲ್ಲಿ ನಡೆದಿದೆ. ಸೇತುವೆಯನ್ನು ನವೀಕರಣಗೊಳಿಸಿ, ಐದು ದಿನಗಳ ಹಿಂದೆಯಷ್ಟೇ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದ್ರೀಗ ಇದೇ ಸೇತುವೆಯಲ್ಲಿ ಬಾರೀ ದುರಂತ ಸಂಭವಿಸಿದೆ.
ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ನಿರ್ಮಿಸಲಾಗಿದ್ದ ಮೇಲ್ಸೇತುವೆ ಕುಸಿದ ಪರಿಣಾಮ 500ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಮುಳುಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳೀಯರು ಹಾಗೂ ಸರಕಾರಿ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಆರಂಭಿಕ ಒಳಹರಿವಿನ ಪ್ರಕಾರ, ಸೇತುವೆಯು ಸ್ಥಳೀಯ ಪಿಕ್ನಿಕ್ ತಾಣವಾಗಿದ್ದು ವಾರಾಂತ್ಯದಲ್ಲಿ ಮತ್ತು ಇತರ ರಜಾದಿನಗಳಲ್ಲಿ ಹೆಚ್ಚಿನ ಜನಸಂದಣಿ ಇರುತ್ತದೆ.
ಪ್ರಾಣ ಕಳೆದುಕೊಂಡವರ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಹಲವು ವರದಿಗ ಪ್ರಕಾರ ಘಟನೆಯಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವಿಲ್ಲದೇ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಕಷ್ಟಕರವಾಗಿಸುವ ಅಂಶವಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ 6 ತಿಂಗಳ ಹಿಂದೆಯಷ್ಟೇ ಮೇಲ್ಸೇತುವೆ ಉದ್ಘಾಟನೆಯಾಗಿದೆ. ತರಾತುರಿಯಲ್ಲಿ ಕಾಮಗಾರಿ ನಡೆದಿದ್ದು, ಸೂಕ್ತ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದರು. ಆದರೆ, ನೀರಿನ ಮಟ್ಟ ಹೆಚ್ಚಿಲ್ಲ ಎಂದು ಸ್ಥಳೀಯ ಶಾಸಕ ಲಲಿತ್ ಮಾಹಿತಿ ನೀಡಿದ್ದಾರೆ.
ಗುಜರಾತ್‌ಗೆ ಮೂರು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದ ಬಗ್ಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಪ್ರಧಾನಿಯವರು ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಇನ್ನು ಘಟನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಶಿಕ್ಷಣ ಇಲಾಖೆ ಕಚೇರಿ ಬಳಿ 2 ಕಾರು ಬಾಂಬ್ ಬ್ಲಾಸ್ಟ್: 100ಕ್ಕೂ ಅಧಿಕ ಮಂದಿ ಬಲಿ
ಇದನ್ನೂ ಓದಿ : TTD: ವಿಐಪಿ ದರ್ಶನ ಸಮಯದಲ್ಲಿ ಪ್ರಾಯೋಗಿಕ ಬದಲಾವಣೆ ತಂದ ಟಿಟಿಡಿ: ತಿಮ್ಮಪ್ಪನ ಉಚಿತ ದರ್ಶನ ಮತ್ತಷ್ಟು ಸುಲಭ
ಇದನ್ನೂ ಓದಿ : ದ.ಕ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಹೊಸ ಮುಖ : ಪುತ್ತೂರು, ಬಂಟ್ವಾಳ ಸೇರಿ ಕಾಂಗ್ರೆಸ್ ನಲ್ಲಿ ಹಳಬರಿಗಿಲ್ಲ ಟಿಕೇಟ್ !
Heritage Over bridge collapses in Gujarat 500 fall in river, 30 dead