ಸೋಮವಾರ, ಏಪ್ರಿಲ್ 28, 2025
HomeNationalHijab emergency hearing : ಸುಪ್ರೀಂ ನಲ್ಲಿ ಹಿಜಾಬ್ ತುರ್ತು ವಿಚಾರಣೆ ಗೆ ನಕಾರ :...

Hijab emergency hearing : ಸುಪ್ರೀಂ ನಲ್ಲಿ ಹಿಜಾಬ್ ತುರ್ತು ವಿಚಾರಣೆ ಗೆ ನಕಾರ : ಪರೀಕ್ಷೆ ಹೊತ್ತಿನಲ್ಲಿ ವಿದ್ಯಾರ್ಥಿನಿಯರ ಪರದಾಟ

- Advertisement -

ನವದೆಹಲಿ : ಹಿಜಾಬ್ ಕುರಿತು ಸುಪ್ರೀಂ‌ಕೋರ್ಟ್ ನ ತೀರ್ಪು ಬಳಿಕವೇ ಪರೀಕ್ಷೆ ಬರೆಯೋ ಲೆಕ್ಕಾಚಾರದಲ್ಲಿದ್ದ ಹಿಜಾಬ್ ವಿದ್ಯಾರ್ಥಿನಿಯರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಹಿಜಾಬ್ ವಿಚಾರದಲ್ಲಿ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Hijab emergency hearing) ನಿರಾಕರಿಸಿದೆ. ಇದರಿಂದ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸ ಬೇಕಿರುವ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವ ಸ್ಥಿತಿ ಬಂದಿದೆ.

ಕಳೆದ‌ ಡಿಸೆಂಬರ್ ನಿಂದ ಕರ್ನಾಟಕದಲ್ಲಿ ಹಿಜಾಬ್ ವಿವಾದ ಸದ್ದು ಮಾಡಲಾರಂಭಿಸಿತ್ತು. ಉಡುಪಿಯ ಆರು ವಿದ್ಯಾರ್ಥಿನಿಯರು ತಮಗೆ ಕಾಲೇಜಿನ ಒಳಗೆ ತರಗತಿಯಲ್ಲೂ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಇದಕ್ಕೆ ಶಾಲಾ ಆಡಳಿತ ಮಂಡಳಿ ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಹಿಜಾಬ್ ಗೆ ಅಗ್ರಹಿಸಿ ಈ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ಮೊದಲು ವಿಚಾರಣೆ ನಡೆಯಿತಾದರೂ ಬಳಿಕ ಈ ಪ್ರಕರಣವನ್ನು ಹೈಕೋರ್ಟ್ ನ ತ್ರೀಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆ ಬಳಿಕ ಮಾರ್ಚ್ 16 ರಂದು ನ್ಯಾಯಮೂರ್ತಿಗಳು ಹಿಜಾಬ್ ಮುಸ್ಲಿಂ ನ ಧಾರ್ಮಿಕ ಆಚರಣೆಯ ಭಾಗವಲ್ಲ. ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಅದೇಶ ನೀಡಿದ್ದರು. ಇದರಿಂದ ಅಸಮಧಾನಗೊಂಡ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಾರ್ಚ್ 17 ರಂದು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಈಗ ನ್ಯಾಯಾಲಯ ಈ ಪ್ರಕರಣದ ತುರ್ತು ವಿಚಾರಣೆಗೆ ದಿನಾಂಕ ನಿಗದಿಗೆ ನಿರಾಕರಿಸಿದೆ.

ಹೈಕೋರ್ಟ್ ನೀಡಿರುವ ಹಿಜಾಬ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಪರೀಕ್ಷೆ ಸಮೀಪಿಸುತ್ತಿರುವುದರಿಂದ ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಿದ್ಯಾರ್ಥಿನಿಯರ ಪರ ಅರ್ಜಿ ಸಲ್ಲಿಸಿದ್ದ ನ್ಯಾಯವಾದಿ ದೇವದತ್ ಕಾಮತ್ ಆಗ್ರಹಿಸಿದ್ದರು. ಆದರೆ ಇದಕ್ಕೆ ಇಂದು ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದ್ದು, ತುರ್ತು ವಿಚಾರಣೆ ನಡೆಸಲು ದಿನಾಂಕ ನಿಗದಿಗೊಳಿಸಲು ಸಾಧ್ಯವಿಲ್ಲ ಎಂದಿದೆ. ಮಾತ್ರವಲ್ಲ ಇದಕ್ಕೂ ವಿದ್ಯಾರ್ಥಿನಿಯರ ಪರೀಕ್ಷೆಗೂ ಯಾವ ಸಂಬಂಧವೂ ಇಲ್ಲ. ಈ ವಿಚಾರವನ್ನು ಅತಿರಂಜಿತ ಗೊಳಿಸಬೇಡಿ ಎಂದು ತಾಕೀತು ಮಾಡಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಒಟ್ಟಿನಲ್ಲಿ ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತಿರೋ ಹಿಜಾಬ್ ಪ್ರಕರಣ ಸದ್ಯ ತಣ್ಣಗಾಗುವ ಲಕ್ಷಣವೇ ಕಾಣುತ್ತಿಲ್ಲ.

ಇದನ್ನೂ ಓದಿ : ಆರ್‌ಆರ್‌ಆರ್‌ಗಾಗಿ ಬಲಿಯಾಗುತ್ತಾ ಜೇಮ್ಸ್ ಚಿತ್ರ : ಖಡಕ್ ಎಚ್ಚರಿಕೆ ಕೊಟ್ಟ ಕರವೇ

ಇದನ್ನೂ ಓದಿ : ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ : NIA ತನಿಖೆ

Hijab emergency hearing not possible says Supreme Court

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular