ನವದೆಹಲಿ : ಹೋಟೆಲ್ ಸೆಕ್ಸ್ ದಂಧೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿದ ಪೊಲೀಸರು ಬೃಹತ್ ಪ್ರಮಾಣದಲ್ಲಿ ಕಾಂಡೋಮ್, ಮಾತ್ರೆಗಳನ್ನು ವಶಕ್ಕೆ ಪಡೆದಿದ್ದು, 12 ಯುವತಿಯರು ಸೇರಿದಂತೆ 22 ಮಂದಿಯನ್ನು ಬಂಧಿಸಿದ್ದಾರೆ. ನೋಯ್ಡಾದ ಚೀತಿ ಗ್ರಾಮದಲ್ಲಿರುವ ಕ್ರೌನ್ ಪ್ಲಾಜಾ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಸೆಕ್ಸ್ ದಂಧೆಯಲ್ಲಿ ತೊಡಗಿದ್ದ 22 ಮಂದಿಯ ಜೊತೆಗೆ ಹೋಟೆಲ್ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನೋಯ್ಡಾದ ಗೌತಮಬುದ್ಧ ನಗರ ಜಿಲ್ಲೆಯ ಚೀತಿ ಗ್ರಾಮದಲ್ಲಿರುವ ಕ್ರೌನ್ ಪ್ಲಾಜಾ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿತ್ತು. ಗ್ರೇಟರ್ ನೊಯ್ದಾದ ಡಿಸಿಪಿ ರಾಜೇಶ್ ಕುಮಾರ್ ನೇ ತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಸೆಕ್ಸ್ ನಲ್ಲಿ ತೊಡಗಿದ್ದ ಜೋಡಿಗಳನ್ನ ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಹೋಟೆಲ್ ಮ್ಯಾನೇಜರ್ ಸೇರಿದಂತೆ ಒಟ್ಟು 23 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ಸಮಯಗಳಿಂದಲೂ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು ಸ್ಥಳೀಯರು ದೂರು ನೀಡುತ್ತಿದ್ದರು. ಆದರೆ ಪೊಲೀಸರೇ ದಂಧೆಗೆ ಸಹಕಾರ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತ್ತುಗೊಳಿಸಲಾಗಿದೆ. ಇನ್ನು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.